ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿಯಲ್ಲಿ ಮಳೆ ಅಬ್ಬರಿಸಿದ್ದರೆ, ಒಳನಾಡಿನಲ್ಲಿ ಪ್ರತ್ಯೇಕ ಕಡೆಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ ಇದೆ. ಐಎಂಡಿ (ಭಾರತೀಯ ಹವಾಮಾನ ಇಲಾಖೆ) ಏಳು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಚಿಕ್ಕಬಳ್ಳಾಪುರ, ಬೆಳಗಾವಿ, ಬೀದರ್, ಕೋಲಾರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯ ಎಚ್ಚರಿಕೆ ಇದೆ. ಹೀಗಾಗಿ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯ ಒಂದೆರಡು ಕಡೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಕೊಡಗಿನಲ್ಲಿ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾದರೆ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆ ಸುರಿಯಲಿದೆ.
ಮೀನುಗಾರರಿಗೆ ಎಚ್ಚರಿಕೆ:
ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಕರಾವಳಿಯಲ್ಲಿ 40ರಿಂದ 55 ಕಿ.ಮೀ ವೇಗದಲ್ಲಿ ಚಂಡಮಾರುತ ಬೀಸುವ ವಾತಾವರಣ ಇರುತ್ತದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ರಾಜ್ಯದಲ್ಲಿ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದೆ.
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ:
ಬೆಂಗಳೂರು ನಗರ: 28 ಡಿ.ಸೆ (ಗರಿಷ್ಠ) – 20 ಡಿ.ಸೆ (ಕನಿಷ್ಠ)
ಮಂಗಳೂರು: 29 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 29 ಡಿ.ಸೆ – 21 ಡಿ.ಸೆ
ಗದಗ: 30 ಡಿ.ಸೆ – 21 ಡಿ.ಸೆ
ಹೊನ್ನಾವರ: 31 ಡಿ.ಸೆ- 24 ಡಿ.ಸೆ
ಕಲಬುರಗಿ: 32 ಡಿ.ಸೆ – 23 ಡಿ.ಸೆ
ಬೆಳಗಾವಿ: 28 ಡಿ.ಸೆ – 21 ಡಿ.ಸೆ
ಕಾರವಾರ: 31 ಡಿ.ಸೆ – 24 ಡಿ.ಸೆ