ಪಾಕಿನಲ್ಲಿ ಪ್ರಬಲ ಬಾಂಬ್ ಸ್ಫೋಟ: ಸತ್ತವರೆಷ್ಟು? ಗಾಯಾಳುಗಳೆಷ್ಟು?

ಕರಾಚಿ: ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಕನಿಷ್ಠ 34 ಜನರು ಮೃತಪಟ್ಟಿದ್ದು ಮತ್ತು 100ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಕುರಿತು ವರದಿಯಾಗಿದೆ.

ಪ್ರವಾದಿ ಮುಹಮ್ಮದ್ ಅವರ ಜನ್ಮ ವಾರ್ಷಿಕೋತ್ಸವ ಆಚರಿಸಲು ಜನರು ಸೇರುತ್ತಿದ್ದ ಬಲೂಚಿಸ್ತಾನ್ ಮಸ್ತುಂಗ್ ಜಿಲ್ಲೆಯ ಮಸೀದಿಯ ಬಳಿ ಭಾರೀ ಸ್ಫೋಟ ಸಂಭವಿಸಿದೆ.

ಅಧಿಕಾರಿಗಳ ಮಾಹಿತಿ ಪ್ರಕಾರ, ಮೃತಪಟ್ಟವರಲ್ಲಿ ಮಸ್ತುಂಗ್‌ನ ಡಿಎಸ್‌ಪಿ ನವಾಜ್ ಗಶ್ಕೋರಿ ಕೂಡ ಸೇರಿದ್ದಾರೆ ಎನ್ನಲಾಗಿದೆ.



































 
 

ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ರವಾನಿಸಲಾಗಿದ್ದು, ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ. ಸ್ಫೋಟದ ಹೊಣೆಯನ್ನು ಯಾರೂ ಹೊತ್ತುಕೊಂಡಿಲ್ಲ.

ಸೆಪ್ಟೆಂಬರ್‌ನಲ್ಲಿ ಮಸ್ತುಂಗ್ ಜಿಲ್ಲೆಯಲ್ಲಿ ನಡೆದ ಎರಡನೇ ದೊಡ್ಡ ಸ್ಫೋಟ ಇದಾಗಿದ್ದು. ಈ ತಿಂಗಳ ಆರಂಭದಲ್ಲಿ ಸಂಭವಿಸಿದ ಭೀಕರ ಸ್ಪೋಟದಲ್ಲಿ ಜಮಿಯತ್ ಉಲೇಮಾ-ಎ-ಇಸ್ಲಾಂ ಫಝಲ್ (ಜೆಯುಐ-ಎಫ್) ನಾಯಕ ಹಫೀಜ್ ಹಮ್ದುಲ್ಲಾ ಸೇರಿದಂತೆ ಹಲವಾರು ಜನರು ಗಾಯಗೊಂಡರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top