ಪುತ್ತೂರು: ನೆಲ್ಲಿಕಟ್ಟೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಪ್ರಥಮ ಪಿ.ಯು.ಸಿ ವಿದ್ಯಾರ್ಥಿಗಳಾದ ಧನ್ವಿತ್ ಹಾಗೂ ಅನಿಕೇತ್ ಎನ್. ಅವರು ಜಿಲ್ಲಾ ಮಟ್ಟದ ಈಜು ಸ್ಪರ್ಧೆಗಳಲ್ಲಿ ಬಹುಮಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಪದವಿ ಪೂರ್ವ ಶಿಕ್ಷಣ ಇಲಾಖೆಯ ಜಿಲ್ಲಾ ಘಟಕ ಹಾಗೂ ಮಂಗಳೂರಿನ ಬಲ್ಮಠದ ಸರಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜಿನ ಆಶ್ರಯದಲ್ಲಿ ಮಂಗಳೂರಿನ ಮಂಗಳ ಈಜು ಕ್ಲಬ್’ನಲ್ಲಿ ಸ್ಪರ್ಧೆ ನಡೆದಿತ್ತು.
ಪುತ್ತೂರು ಮರೀಲಿನ ಕೇಶವ ಕುಮಾರ್ ಕೆ.ಎಂ. ಮತ್ತು ಮೀನಾಕ್ಷಿ ದಂಪತಿ ಪುತ್ರ ಧನ್ವಿತ್ 100 ಮೀಟರ್ ಫ್ರೀ ಸ್ಟೈಲ್, 50 ಮೀಟರ್ ಫ್ರೀ ಸ್ಟೈಲ್ ಹಾಗೂ 50 ಮೀಟರ್ ಬ್ಯಾಕ್ ಸ್ರ್ಟೋಕ್ ಸ್ಪರ್ಧೆಗಳಲ್ಲಿ ಎರಡು ಚಿನ್ನದ ಪದಕ ಹಾಗೂ ಒಂದು ಬೆಳ್ಳಿ ಪದಕ ಗಳಿಸಿದ್ದಾರೆ.
ದರ್ಬೆಯ ನಳಿನಾಕ್ಷ ಎನ್ ಹಾಗೂ ಗಾಯತ್ರಿ ಪಿ ದಂಪತಿ ಪುತ್ರ ಅನಿಕೇತ್ ಎನ್. 200 ಮೀಟರ್ ಮಿಡ್ಲೆ, 100 ಮೀಟರ್ ಬ್ಯಾಕ್ ಸ್ಟ್ರೋಕ್ ಹಾಗೂ 50 ಮೀಟರ್ ಬ್ಯಾಕ್ ಸ್ಟ್ರೋಕ್ ಸ್ಪರ್ಧೆಗಳಲ್ಲಿ ಎರಡು ಚಿನ್ನ ಹಾಗೂ ಒಂದು ಬೆಳ್ಳಿ ಪದಕ ಗೆದ್ದುಕೊಂಡಿದ್ದಾರೆ.
























