ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ದಂಪತಿ ಮೃತ್ಯು!!

ಬೈಂದೂರು: ರಸ್ತೆಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ತುಳಿದು ದಂಪತಿ ಮೃತಪಟ್ಟ ಘಟನೆ ಬೈಂದೂರಿನಲ್ಲಿ ನಡೆದಿದೆ.

ಶುಕ್ರವಾರ ಮಧ್ಯಾಹ್ನ ಘಟನೆ ನಡೆದಿದ್ದು, ಮಹಾಬಲ ದೇವಾಡಿಗ (58) ಮತ್ತು ಲಕ್ಷ್ಮಿ ಮಹಾಬಲ ದೇವಾಡಿಗ (48) ಮೃತಪಟ್ಟವರು.

ಹೆಮ್ಮಾಡಿ ಗ್ರಾಮದ ಸುಳ್ಸೆ ಭಟ್ರು ಮನೆ ತೋಟದ ಜಮೀನಿನಲ್ಲಿ ಈ ಘಟನೆ ನಡೆದಿದ್ದು, ದಂಪತಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.



































 
 

ಮಧ್ಯಾಹ್ನದ ವೇಳೆ ಮನೆ ಕೆಲಸಕ್ಕೆ ಹೋಗುವಾಗ ಪತಿಗೆ ವಿದ್ಯುತ್ ಶಾಕ್ ತಗುಲಿದ್ದು ಅವರನ್ನು ಪತ್ನಿ ರಕ್ಷಿಸಲು ಹೋಗಿ ಇಬ್ಬರೂ ಮೃತಪಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಡಿವೈಎಸ್ಪಿ ಬೆಳ್ಳಿಯಪ್ಪ, ಕುಂದಾಪುರ ವೃತ್ತ ನಿರೀಕ್ಷಕ ಜಯರಾಮ್ ಡಿ. ಗೌಡ, ಕಂದಾಯ ಆರ್.ಐ . ರಾಘವೇಂದ್ರ ದೇವಾಡಿಗ, ಮೆಸ್ಕಾಂ ಸಿಬ್ಬಂದಿ ಬಂದು ಪರಿಶೀಲನೆ ಮಾಡಿದ್ದಾರೆ. ಕಂಡ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top