ಶಿವಮೊಗ್ಗ: ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿ ಮಾಡಲಾಗಿದೆ.
ಈ ಸಂದರ್ಭದಲ್ಲಿ ಜನರು ಗುಂಪು ಸೇರುವುದು, ಪ್ರತಿಭಟನೆ, ಮೆರವಣಿಗೆ ಮಾಡುವುದು, ಭಾಷಣ ಮಾಡುವುದು, ಫ್ಲೆಕ್ಸ್, ಬಂಟಿಂಗ್ಸ್ ಬ್ಯಾನರ್ ಕಟ್ಟುವುದು, ಮಾರಕಾಸ್ತ್ರ, ಸ್ಫೋಟಕಗಳ ಬಳಕೆ ನಿರ್ಬಂಧಿಸಲಾಗಿದೆ.
ಶಿವಮೊಗ್ಗದಾದ್ಯಂತ ಪೊಲೀಸ್ ಬಂದೋಬಸ್ತ್ ಹೆಚ್ಚಿಸಲಾಗಿದೆ.