ಕಡಬ: ಸಾಕುಪ್ರಾಣಿಗಳನ್ನು ಸಾರ್ವಜನಿಕ ಸ್ಥಳದಲ್ಲಿ ಬಿಟ್ಟಿದ್ದೇ ಆದರೆ, ಆ ಸಾಕುಪ್ರಾಣಿಗಳನ್ನು ಬಂಧಿಸಲಾಗುವುದು. ಮಾತ್ರವಲ್ಲ, ಅದರ ಮಾಲಕರಿಗೆ ದಂಡ ವಿಧಿಸಲಾಗುವುದು.
ಹೀಗೆಂದು ಕಡಬ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಫಕೀರ ಮೂಲ್ಯ ಅವರು ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.
ಸಾಕುಪ್ರಾಣಿಗಳನ್ನು ಸಾರ್ವಜನಿಕ ಪ್ರದೇಶದಲ್ಲಿ ಬಿಡುವುದರಿಂದ ನೂರಾರು ಸಮಸ್ಯೆಗಳು ಕಾಣಿಸಿಕೊಂಡಿದೆ. ಸಾರ್ವಜನಿಕರಿಗೆ ತೊಂದರೆ ಆಗುವ ಜೊತೆಗೆ, ಅಪಘಾತಗಳು ಸಂಭವಿಸುವ ಸಾಧ್ಯತೆಯೂ ಇದೆ. ಕೃಷಿ ಹಾನಿ ಆದ ಬಗ್ಗೆಯೂ ವರದಿಯಾಗಿದೆ. ಆದ್ದರಿಂದ ಸಾರ್ವಜನಿಕ ಸ್ಥಳದಲ್ಲಿ ಸಾಕುಪ್ರಾಣಿಗಳನ್ನು ಬಿಡದಂತೆ ಪಟ್ಟಣ ಪಂಚಾಯತ್ ಎಚ್ಚರಿಕೆಯ ಸಂದೇಶ ರವಾನಿಸಿದೆ.
ಆಡು, ದನ, ಕರು ಸೇರಿದಂತೆ ಸಾಕುಪ್ರಾಣಿಗಳನ್ನು ಸಾರ್ವಜನಿಕ ಸ್ಥಳದಲ್ಲಿ ಬಿಡುವುದು, ಮೇವಿಗಾಗಿ ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕುವುದು ಮೊದಲಾದ ಘಟನೆಗಳು ಪಟ್ಟಣ ಪಂಚಾಯತ್ ಗಮನಕ್ಕೆ ಬಂದಿದೆ. ಇದರ ಬಗ್ಗೆ ಸಾಕಷ್ಟು ದೂರುಗಳು ಕೇಳಿಬಂದಿವೆ. ವಾಹನಗಳು ರಸ್ತೆಗೆ ಬಂದು, ಅಪಘಾತ ಸಂಭವಿಸುವ ಸಾಧ್ಯತೆಯೂ ಇದೆ. ಹಾಗಾಗಿ, ಮುಂದೆ ಸಾಕುಪ್ರಾಣಿಗಳು ಸಾರ್ವಜನಿಕ ಸ್ಥಳದಲ್ಲಿ ಕಂಡುಬಂದರೆ ಅವುಗಳನ್ನು ಬಂಧಿಸಲಾಗುವುದು. ಮಾತ್ರವಲ್ಲಿ ಅವುಗಳ ವಾರೀಸುದಾರರಿಗೆ ದಂಡ ವಿಧಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.