ಪುತ್ತೂರು: ವಿಶ್ವ ಹಿಂದೂ ಪರಿಷತ್, ಬಜರಂಗದಳ 60ನೇ ವರ್ಷಕ್ಕೆ ಪಾದಾರ್ಪಣೆ ಮಾಡುವ ಹಿನ್ನಲೆಯಲ್ಲಿ ಅ. 7ರಂದು ಪುತ್ತೂರಿನಲ್ಲಿ ನಡೆಯಲಿರುವ ಶೌರ್ಯ ಜಾಗರಣ ರಥಯಾತ್ರೆ, ಬೃಹತ್ ಹಿಂದೂ ಶೌರ್ಯ ಸಂಗಮದ ಆಮಂತ್ರಣ ಪತ್ರಿಕೆಯನ್ನು ಗುರುವಾರ ಸಂಜೆ ಪುತ್ತೂರು ನಗರದಾದ್ಯಂತ ವಿತರಿಸಲಾಯಿತು.
ನಗರದ ದರ್ಬೆ ವೃತ್ತದ ಬಳಿ ಆಮಂತ್ರಣ ಪತ್ರಿಕೆ ವಿತರಣೆಗೆ ಚಾಲನೆ ನೀಡಿ, ಅಲ್ಲಿಂದ ಕಾಲ್ನಡಿಗೆಯಲ್ಲಿ ಸಾಗಿ ಅಂಗಡಿ ಮುಂಗಟ್ಟುಗಳಿಗೆ ಆಮಂತ್ರಣ ಪತ್ರಿಕೆ ವಿತರಿಸಲಾಯಿತು.
ಬಜರಂಗದಳ ದಕ್ಷಿಣ ಪ್ರಾಂತ ಸಹಸಂಚಾಲಕ ಮುರಳೀಕೃಷ್ಣ ಹಸಂತಡ್ಕ, ಶೌರ್ಯ ಜಾಗರಣ ರಥಯಾತ್ರೆ ಸ್ವಾಗತ ಸಮಿತಿ ಅಧ್ಯಕ್ಷ ಕಿಶೋರ್ ಕುಮಾರ್ ಬೊಟ್ಯಾಡಿ, ಕಾರ್ಯದರ್ಶಿ ವಿರೂಪಾಕ್ಷ ಭಟ್ ಮಚ್ಚಿಮಲೆ, ವಿಹಿಂಪ ಪುತ್ತೂರು ಜಿಲ್ಲೆಯ ಡಾ. ಕೃಷ್ಣಪ್ರಸನ್ನ, ವಿಶಾಖ್ ರೈ ಮತ್ತಿತರರು ಪಾಲ್ಗೊಂಡಿದ್ದರು.