ಪುತ್ತೂರು: ಚಾರ್ವಾಕ ಕುಂಬ್ಲಾಡಿ ಶ್ರೀ ಕುಕ್ಕೆನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೊತ್ಸವ ನಡೆಯುತ್ತಿದ್ದು, ಬುಧವಾರ ಶ್ರೀ ಉಳ್ಳಾಕ್ಲು ಮತ್ತು ಶ್ರೀ ಉಳ್ಳಾಲ್ತಿ ಪ್ರತಿಷ್ಠೆ ಸಾನಿಧ್ಯ ಕಲಶಾಭಿಷೇಕ ಜರಗಿತು.
ಬೆಳಿಗ್ಗೆ ಬೆಳಿಗ್ಗೆ 8ರಿಂದ ಶ್ರೀ ಉಳ್ಳಾಕ್ಲು ಮತ್ತು ಶ್ರೀ ಉಳ್ಳಾಲ್ತಿ ಸ್ಥಾನದಲ್ಲಿ ಗಣಪತಿ ಹೋಮ, ಸಾನಿಧ್ಯ ಕಲಶ ಪೂಜೆ, ಅನುಜ್ಞಾ ಕಲಶಪೂಜೆ, ಮಧ್ಯಾಹ್ನ 11.45ರಿಂದ ಶ್ರೀ ಉಳ್ಳಾಕ್ಲು ಮತ್ತು ಶ್ರೀ ಉಳ್ಳಾಲ್ತಿ ಪ್ರತಿಷ್ಠೆ ಸಾನಿಧ್ಯ ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ಸಂಜೆ ದೇವಸ್ಥಾನದಲ್ಲಿ ಕುಂಬೇಶ ಕರ್ಕರೀ ಕಲಶಪೂಜೆ, ಬ್ರಹ್ಮಕಲಶಪೂಜೆ, ಪರಿಕಲಶಪೂಜೆ, ಕಲಶಾಧಿವಾಸ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಜರಗಲಿದೆ.
ರಾತ್ರಿ 7ರಿಂದ ಸಭಾ ಕಾರ್ಯಕ್ರಮ ನಡೆಯಲಿದ್ದು, ಬೆಂಗಳೂರು ಗೋಲ್ಡ್ ಮ್ಯಾನ್ ಸಾಚ್‍ಸ್‍್ನ ಉಪಾಧ್ಯಕ್ಷ ಪ್ರದೀಪ್ ಆರ್. ಗೌಡ ಅರುವಗುತ್ತು ಅಧ್ಯಕ್ಷತೆ ವಹಿಸಲಿದ್ದಾರೆ. ಬ್ರಹ್ಮಶ್ರೀ ನೀಲೆಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳು ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಂಸದ ನಳಿನ್ ಕುಮಾರ್ ಕಟೀಲ್ ಮೊದಲಾದವರು ಅತಿಥಿಯಾಗಿರುವರು. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ, ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಿಂದ ನೃತ್ಯ ವೈಭವ, ರಾತ್ರಿ 9ರಿಂದ ಮಂಗಳೂರು ಕಿನ್ನಿಗೋಳಿ ಲೋಲಾಕ್ಷ ಮತ್ತು ಬಳಗದಿಂದ ಜಾದೂ ಪ್ರದರ್ಶನ ನಡೆಯಲಿದೆ.