ಪುತ್ತೂರು: ಇಲ್ಲಿಯ ಕಾಲೇಜೊಂದರ ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ನಗರದ ಖಾಸಗಿ ಕಾಲೋಜೊಂದರ ವಿದ್ಯಾರ್ಥಿ, ಕುರಿಯ ಪಡ್ಪು ನಿವಾಸಿ ವೀಕ್ಷಿತ್ (17) ಮೃತಪಟ್ಟ ವಿದ್ಯಾರ್ಥಿ. ಘಟನೆ ನಡೆಯುತ್ತಿದ್ದಂತೆ ಸ್ಥಳೀಯ ಬಿಜೆಪಿ ಮುಖಂಡ ಬೂಡಿಯಾರ್ ರಾಧಾಕೃಷ್ಣ ರೈ ಸ್ಥಳಕ್ಕೆ ಭೇಟಿ ನೀಡಿ ಗ್ರಾಮಾಂತರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಆತ್ಮಹತ್ಯೆಗೆ ಕಾರಣಗಳು ತಿಳಿದು ಬಂದಿಲ್ಲ. ವೀಕ್ಷಿತ್ ತಂದೆ, ತಾಯಿ, ಸಹೋದರ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
























