ಅ.15 : ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ಸ್ವಂತ ಕಚೇರಿ ಹಾಗೂ ವಾಣಿಜ್ಯ ಮಳಿಗೆಗಳ ಸಂಕೀರ್ಣದ ಶಂಕು ಸ್ಥಾಪನೆ

ಸವಣೂರು: ಪುತ್ತೂರಿನಲ್ಲಿ ಕಾರ್ಯಾಚರಿಸುತ್ತಿರುವ ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ಸ್ವಂತ ಕಚೇರಿ ಹಾಗೂ ವಾಣಿಜ್ಯ ಮಳಿಗೆಗಳ ಸಂಕೀರ್ಣದ ಶಂಕು ಸ್ಥಾಪನಾ ಸಮಾರಂಭ ಅ.15 ಭಾನುವಾರ ಸವಣೂರು-ಸುಬ್ರಹ್ಮಣ್ಯ ರಸ್ತೆಯ ಸವಣೂರಿನಲ್ಲಿ ನಡೆಯಲಿದೆ.

ಸಮಾರಂಭದಲ್ಲಿ ಶ್ರೀ ಕ್ಷೇತ್ರ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಂನ ಶ್ರೀ ಗುರುದೇವಾನಂದ ಸ್ವಾಮೀಜಿ ಶಂಕುಸ್ಥಾಪನೆ ನೆರವೇರಿಸಿ ಆಶೀರ್ವಚನ ನೀಡಲಿದ್ದಾರೆ. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಕಡಬ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್ ಎನ್., ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು, ಸವಣೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಂದರಿ ಬಿ.ಎಸ್. ಉಪಸ್ಥಿತರಿರುವರು ಎಂದು ಸಂಘ ಪ್ರಕಟಣೆಯಲ್ಲಿ ತಿಳಿಸಿದೆ.

ಈಗಾಗಲೇ ಸಂಘ ಪುತ್ತೂರು, ಸುಳ್ಯ, ಸುಬ್ರಹ್ಮಣ್ಯ, ವಿಟ್ಲ, ಉಜಿರೆ, ಕಡಬ, ಸವಣೂರು, ಸಾಲೆತ್ತೂರು, ಕುಂಬ್ರ, ಬೆಳ್ಳಾರೆ, ಪಂಜ, ಬೊಳುವಾರು ಹಾಗೂ ಮಡಂತ್ಯಾರುಗಳಲ್ಲಿ ತನ್ನ ಶಾಖೆಯನ್ನು ಹೊಂದಿದೆ.



































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top