5 ವರ್ಷಗಳಿಂದ  ತಲೆಮರೆಸಿಕೊಂಡಿದ್ದ 6 ಆರೋಪಿಗಳು ಸೆರೆ!

ಬಂಟ್ವಾಳ: ಫರಂಗಿಪೇಟೆಯಲ್ಲಿ ಅಕ್ರಮ ಮರಳು ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಉತ್ತರಪ್ರದೇಶ ಮೂಲದ ಒಟ್ಟು ಆರು ಮಂದಿ ಆರೋಪಿಗಳನ್ನು ಬಂಟ್ವಾಳ ‌ಗ್ರಾಮಾಂತರ ಪೋಲೀಸರ ತಂಡ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ.

ಉತ್ತರ ಪ್ರದೇಶ ಮೂಲದ ಬಬುಲು ಸಹಾನಿ, ರಾಮ್ ಗೋವಿಂದ ಸಹಾನಿ, ಅಮಿತ್ ಕುಮಾರ್, ಸತ್ಯೇಂದ್ರ ಸಹಾನಿ, ಸೈದಾನ್ ಸಹಾನಿ, ಅಭಯ್ ನಾರಾಯಣ್ ಬಂಧಿತರು.

ಫರಂಗಿಪೇಟೆಯಲ್ಲಿ ಅಕ್ರಮ ಮರಳು ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಮೂಲದ ಆರು ಮಂದಿಯ ಮೇಲೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ 2017ರಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ಆರೋಪಿಗಳಾದ ಇವರು, ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ಊರಿಗೆ ಹೋಗಿ ತಲೆಮರೆಸಿಕೊಂಡಿದ್ದರು.



































 
 

ಗ್ರಾಮಾಂತರ ಪೋಲೀಸ್ ಇನ್ಸ್,ಪೆಕ್ಟರ್ ಶಿವಕುಮಾರ್ ಬಿ. ಹಾಗೂ ಪೋಲಿಸ್ ಉಪನಿರೀಕ್ಷಕರಾದ ಹರೀಶ್ ಎಂ.ಆರ್. ಮತ್ತು ಮೂರ್ತಿ ಅವರ ಮಾರ್ಗದರ್ಶನದಲ್ಲಿ ಸಿಬ್ಬಂದಿಗಳಾದ ಯೋಗೇಶ್ ಡಿ.ಎಲ್, ವಿಜಯ ಕುಮಾರ್ ಉಡುಪಿಯಲ್ಲಿ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಳಿಕ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top