ಪುತ್ತೂರು: ಪುತ್ತೂರು ದಸರಾ ನವದುರ್ಗಾರಾಧನಾ ಸಮಿತಿ ವತಿಯಿಂದ ಪ್ರತಿವರ್ಷ ನಡೆಯುವ “ಪುತ್ತೂರು ದಸರಾ ಮಹೋತ್ಸವ”ಕ್ಕೆ ಸಂಪ್ಯ ಉದಯಗಿರಿ ಶ್ರೀ ವಿಷ್ಣುಮೂರ್ತಿ-ಅನ್ನಪೂರ್ಣೇಶ್ವರಿ ಕ್ಷೇತ್ರದಲ್ಲಿ ಭಾನುವಾರ ಚಾಲನೆ ನೀಡಲಾಯಿತು.
21ನೇ ವರ್ಷದ ಮಹೋತ್ಸವ ಇದಾಗಿದ್ದು, ಕ್ಷೇತ್ರದ ತಂತ್ರಿ ಕುಕ್ಕಾಡಿ ಪ್ರೀತಂ ಪುತ್ತೂರಾಯ ಅವರ ನೇತೃತ್ವದಲ್ಲಿ ಬೆಳಗ್ಗೆ ಗಣಪತಿ ಸಹಿತ ನವದುರ್ಗೆಯರ ಪ್ರತಿಷ್ಠೆ ನಡೆಯಿತು.
ಬಳಿಕ ಆರ್ಯಾಪು ಗ್ರಾಪಂ ಅಧ್ಯಕ್ಷೆ ಗೀತಾ ದೀಪ ಬೆಳಗಿಸಿ ಮಹೋತ್ಸವಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ತಾಪಂ ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ, ನಗರಸಭೆ ಸದಸ್ಯ ಶೀನಪ್ಪ ನಾಯ್ಕ ಉಪಸ್ಥಿತರಿದ್ದರು. ಬಳಿಕ ಭಜನೆ ಜರಗಿತು.