ರಾಗಿಗುಡ್ಡ: ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಗೆ ಶಿವಮೊಗ್ಗಕ್ಕೆ ಭೇಟಿ ನೀಡದಂತೆ ನಿರ್ಬಂಧ ವಿಧಿಸಲಾಗಿದೆ.
ಮಂಗಳವಾರ ರಾತ್ರಿ ಶಿವಮೊಗ್ಗದ ಗಲಭೆ ಪೀಡಿತ ಪ್ರದೇಶ ರಾಗಿಗುಡ್ಡ ಪ್ರದೇಶಕ್ಕೆ ಭೇಟಿ ನೀಡಲು ತೆರಳುತ್ತಿದ್ದ ವೇಳೆ ಪೊಲೀಸರು ಪ್ರಮೋದ್ ಮುತಾಲಿಕ್ ಅವರನ್ನು ಹೊಸನಗರದ ತಾಲೂಕಿನ ಮಾಸ್ತಿಕಟ್ಟೆ ಬಳಿ ತಡೆದು, ಮುಂದಿನ 30 ದಿನಗಳ ಕಾಲ ಶಿವಮೊಗ್ಗ ತೆರಳದಂತೆ ನಿರ್ಬಂಧ ಹೇರಲಾಗಿರುವ ಪ್ರತಿಯನ್ನು ನೀಡಿದ್ದಾರೆ.
ಗಲಭೆ ಪೀಡಿತ ಪ್ರದೇಶದಲ್ಲಿ ಪ್ರಮೋದ್ ಮುತಾಲಿಕ್ ಭೇಟಿ ನೀಡಿ ಪ್ರಚೋದನಕಾರಿ ಭಾಷಣ ಮಾಡುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ. ಅಲ್ಲದೆ ರಾಗಿಗುಡ್ಡ ಪ್ರದೇಶದಲ್ಲಿ ಈಗಾಗಲೇ ಸೆಕ್ಷನ್ 144 ನಿಷೇಧಾಜ್ಞೆ ಜಾರಿಯಲ್ಲಿದ್ದು, ಮುಂದಿನ 30 ದಿನ ಶಿವಮೊಗ್ಗ ಪ್ರವೇಶಿಸದಂತೆ ನೋಟಿಸ್ ನೀಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.