ಪುತ್ತೂರು: ತಾಲೂಕಿನ ಮುಳುಗು ಸೇತುವೆಗಳಲ್ಲಿ ಒಂದಾದ ಚೆಲ್ಯಡ್ಕ ಮುಳುಗು ಸೇತುವೆಯ ಅಪ್ರೋಚ್ ಸ್ಲ್ಯಾಬ್ ಕುಸಿದು ಬಿದ್ದಿದ್ದು, ಈ ಹಿನ್ನಲೆಯಲ್ಲಿ ಕಾಮಗಾರಿ ಆರಂಭಿಸಬೇಕಾಗಿರುವುದರಿಂದ ಅ.27 ರಿಂದ ನ.6ರ ವರೆಗೆ ವಾಹನಗಳು ಬದಲಿ ರಸ್ತೆಯಲ್ಲಿ ಸಂಚರಿಸುವಂತೆ ಲೋಕೋಪಯೋಗಿ ಇಲಾಖೆ ಸೂಚಿಸಿದೆ.
ಆರ್ಯಾಪು ಗ್ರಾಮದ ಒಳತ್ತಡ್ಕ-ದೇವಸ್ಯದಿಂದ ಬೆಟ್ಟಂಪಾಡಿ-ಪಾಣಾಜೆ ಕಡೆಗೆ ಹೋಗುವ ವಾಹನಗಳು ಈ ಮಾರ್ಗವಾಗಿ ಚಲಿಸುವುದನ್ನು ಸ್ಥಗಿತಗೊಳಿಸಬೇಕಾಗಿದೆ. ಬದಲಿ ರಸ್ತೆಯಾಗಿ ದೇವಸ್ಯ-ಬೈರೋಡಿ-ಕಾಪಿಕಾಡು-ಕೈಕಾರ ಮಾರ್ಗವಾಗಿ ವಾಹನಗಳು ಚಲಿಸುವಂತೆ ಸೂಚನೆ ನೀಡಲಾಗಿದೆ.
ಸಾರ್ವಜನಿಕರು ಸಹಕರಿಸಬೇಕೆಂದು ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.