ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಆರೋಪಿ ನೌಷದ್ ಸುಳಿವಿಗೆ ಎರಡು ಲಕ್ಷ ಘೋಷಣೆ

ಬೆಂಗಳೂರು: ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸುಳಿವು ನೀಡಿದವರಿಗೆ ಎರಡು ಲಕ್ಷ ರೂಪಾಯಿ ಘೋಷಣೆ ಮಾಡಿ ಬೆಂಗಳೂರು ಎನ್.ಐ.ಎ ಅಧಿಕಾರಿಗಳು ಸಾರ್ವಜನಿಕ ಪ್ರಕಟಣೆ ಹೊರಡಿಸಿದ್ದಾರೆ.

2022 ಜುಲೈ 26ರಂದು ಹತ್ಯೆಯಾದ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಆರೋಪಿ ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಪೊಯ್ಕೆಗುಡ್ಡೆ ನಿವಾಸಿ ನೌಷದ್ (32) ಎಂಬಾತ ಕೊಲೆ ಮಾಡಿದ ಆರೋಪಿಗಳು ಪರಾರಿಯಾಗಲು ಸಹಕರಿಸಿದ ಹಿನ್ನೆಲೆಯಲ್ಲಿ ಎನ್.ಐ.ಎ ಅಧಿಕಾರಿಗಳು ಈ ಮೊದಲೇ ಪಡಂಗಡಿಯಲ್ಲಿರುವ ಮನೆಗೆ ದಾಳಿ ಮಾಡಿದ್ದರು. ಈ ವೇಳೆ ನೌಷದ್ ಪ್ರಕರಣ ನಡೆದ ಬಳಿಕ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಎನ್.ಐ.ಎ ಅಧಿಕಾರಿಗಳು ನೋಟಿಸ್ ನೀಡಿ ಹೋಗಿದ್ದರು.

ಇದೀಗ ಬೆಂಗಳೂರು ಎನ್.ಐ.ಎ ಅಧಿಕಾರಿಗಳು ನೌಷದ್ ಬಗ್ಗೆ ಸುಳಿವು ನೀಡಿದವರಿಗೆ ಎರಡು ಲಕ್ಷ ರೂ. ಘೋಷಣೆ ಮಾಡುವುದರೊಂದಿಗೆ ಸುಳಿವು ನೀಡಿದವರ ಬಗ್ಗೆ ಮಾಹಿತಿ ಗೌಪ್ಯವಾಗಿಡಲಾಗುವುದು ಎಂದು ಘೋಷಣೆ ಮಾಡಿರುವುದಾಗಿ ಎನ್.ಐ.ಎ ಪ್ರಕಟಣೆ ಹೊರಡಿಸಿದೆ.



































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top