ಪುತ್ತೂರು: ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ನಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಮಂಗಳೂರಿನ ವ್ಯಕ್ತಿಯೊಬ್ಬನನ್ನು ಪುತ್ತೂರು ಮಹಿಳಾ ಠಾಣಾ ಪೊಲೀಸರು ಬಂಧಿಸಿ ಪೋಕ್ಸೋ ಪ್ರಕರಣ ದಾಖಲಿಸಿಕೊಂಡ ಘಟನೆ ಶನಿವಾರ ಸಂಜೆ ನಡೆದಿದೆ.
ಉದಯ (40) ಬಂಧಿತ ವ್ಯಕ್ತಿ.
ಕಿರುಕುಳ ನೀಡಿದ ವಿಚಾರವನ್ನು ಆಕೆ ಬಸ್ನಲ್ಲಿದ್ದ ಪ್ರಯಾಣಿಕರಿಗೆ ತಿಳಿಸಿದ್ದು, ಪ್ರಯಾಣಿಕರು ಆತನನ್ನು ಇಳಿಯಲು ಬಿಡದೆ ತಡೆದಿದ್ದರು. ಬಳಿಕ ಬಸ್ ನ್ನು ಪೊಲೀಸ್ ಠಾಣೆಯ ಬಳಿಗೆ ಬಂದು ನಿಲ್ಲಿಸಲಾಯಿತು. ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡರು ಎಂದು ತಿಳಿದು ಬಂದಿದೆ.
ಘಟನೆಯ ಕುರಿತು ಸುದ್ದಿ ಹರಡುತ್ತಿದ್ದಂತೆ ಕೆಲವು ಯುವಕರು ಮಹಿಳಾ ಪೊಲೀಸ್ ಠಾಣೆಯ ಮುಂದೆ ಜಯಾಯಿಸಿ, ಆರೋಪಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.