ವಿಟ್ಲ: ಸಮುದಾಯ ಆರೋಗ್ಯ ಕೇಂದ್ರಕ್ಕೆ ಶಾಸಕ ಅಶೋಕ್ ಕುಮಾರ್ ರೈ ಭಾನುವಾರ ಭೇಟಿ ನೀಡಿ ಆಸ್ಪತ್ರೆಯ ವ್ಯವಸ್ಥೆಯ ಬಗ್ಹೆ ಪರಿಶೀಲನೆ ನಡೆಸಿದರು.
ಆಸ್ಪತ್ರೆಯಲ್ಲಿ ಹೆರಿಗೆ ತಜ್ಞರ ಕೊರತೆ ಇರುವ ಕಾರಣ ವಿಟ್ಲ ಭಾಗದ ಜನತೆಗೆ ಸಮಸ್ಯೆಯಾಗಿದೆ. ಹಲವು ವರ್ಷಗಳಿಂದ ಇಲ್ಲಿ ಹೆರಿಗೆ ತಜ್ಞರನ್ನು ನೇಮಕ ಮಾಡಿಲ್ಲ. ಗ್ರಾಮೀಣ ಭಾಗದ ಜನತೆಗೆ ಇದರಿಂದ ತುಂಬಾ ಸಮಸ್ಯೆ ಉಂಟಾಗಿದೆ ಎಂದು ಮಾಹಿತಿ ನೀಡಲಾಯಿತು. ಜನತೆಗೆ ಡಯಾಲಿಸಿಸ್ ಕೇಂದ್ರ ಪ್ರಾರಂಭ ಮಾಡುವಂತೆ ಶಾಸಕರಿಗೆ ಮನವಿ ಸಲ್ಲಿಸಲಾಯಿತು.
ಸಮುದಾಯ ಕೇಂದ್ರದ ವೈದ್ಯೆ ಡಾ.ವೇದಾವತಿ, ಆರೋಗ್ಯ ರಕ್ಷಾ ಸಮಿತಿಸದಸ್ಯರಾದ ಅಬ್ದುಲ್ ರಹಿಮಾನ್, ಅಸ್ಮಾ, ಹಸೈನಾರ್, ಕರುಣಾಕರ್ , ಲತಾವೇಣಿ, ಡಾ. ಐ.ಎ. ಶೆಟ್ಡಿ, ಜಲಜಾಕ್ಷಿ, ಲಯನ್ಸ್ ಕ್ಲಬ್ ಅಧ್ಯಕ್ಣ ವಿಟ್ಲ ನಗರ ಕಾಂಗ್ರೆಸ್ ಅಧ್ಯಕ್ಣ ಶ್ರೀನಿವಾಸ್ ಶೆಟ್ಟಿ ಕೊಲ್ಯ ಉಪಸ್ಥಿತರಿದ್ದರು. ಮಹಮ್ಮದ್ ಇಕ್ಬಾಲ್ ವಂದಿಸಿದರು.