ನ.13: ರೈ ಚಾರಿಟೇಬಲ್ ಟ್ರಸ್ಟ್  ವಾರ್ಷಿಕ ಮಹಾಸಭೆ, ಸಮಾವೇಶ | 50 ಸಾವಿರಕ್ಕೂ ಮಿಕ್ಕಿ ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆ: ಅಶೋಕ್ ರೈ

ಪುತ್ತೂರು: ನ.13 ರಂದು ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಡೆಯಲಿರುವ ಟ್ರಸ್ಟಿನ ಮಹಾಸಭೆ ಹಾಗೂ ಟ್ರಸ್ಟ್ ಫಲಾನುಭವಿಗಳಿಗೆ ವಸ್ತ್ರ ವಿತರಣಾ ಕಾರ್ಯಕ್ರಮ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ‌ನಡೆಯಲಿದ್ದು, ಕಾರ್ಯಕ್ರಮದಲ್ಲಿ ಸುಮಾರು‌ 50 ಸಾವಿರಕ್ಕೂ‌ಮಿಕ್ಕಿ ಫಲಾನುಭವಿಗಳು ಭಾಗವಹಿಸುವ ನಿರೀಕ್ಷೆ ಇದೆ. ಇದಕ್ಕಾಗಿ ಎಲ್ಲಾ ಸಿದ್ದತೆಗಳು ನಡೆಯುತ್ತಿದೆ ಎಂದು ಟ್ರಸ್ಟ್ ಅಧ್ಯಕ್ಣ, ಶಾಸಕ ಅಶೋಕ್ ರೈ ತಿಳಿಸಿದ್ದಾರೆ.

ಶಾಸಕರ ಸಭಾಭವನದಲ್ಲಿ ಬುಧವಾರ ‌ನಡೆದ ಟ್ರಸ್ಟಿನ ಪ್ರಮುಖರ ಸಭೆಯಲ್ಲಿ ಅವರು  ಮಾಹಿತಿ ನೀಡಿದರು.

‌ಸಭೆಯಲ್ಲಿ ಭಾಗವಹಿಸುವ ಎಲ್ಲರಿಗೂ ವಸ್ತ್ರ ವಿತರಣೆ ನಡೆಯಲಿದ್ದು, ಜತೆಗೆ ಸಹಭೋಜನವೂ ನಡೆಯಲಿದೆ. ಕಾರ್ಯಕ್ರಮದ ಯಶಸ್ಸಿಗಾಗಿ ಗ್ರಾಮ ಗ್ರಾಮಗಳಲ್ಲಿ ಸ್ವಾಗತ ಸಮಿತಿಯನ್ನು‌ರಚಿಸಲಾಗಿದ್ದು ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಫಲಾನುಭವಿಗಳು‌ ಭಾಗವಹಿಸುವಂತೆ ಶಾಸಕರು ಮನವಿ ಮಾಡಿದರು.



































 
 

ಸಭೆಯಲ್ಲಿ ಟ್ರಸ್ಟಿನ ಕಾರ್ಯಾಧ್ಯಕ್ಷ ಸುದೇಶ್ ಶೆಟ್ಟಿ. ‌ಪ್ರಮುಖರಾದ ಸುಮಾ ಅಶೋಕ್ ರೈ, ನಿಹಾಲ್ ಶೆಟ್ಟಿ, ರಾಕೇಶ್ ರೈ ಕುದ್ಕಾಡಿ ಮೊದಲಾದವರು ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top