ಹಾಸನ: ವಿದ್ಯಾರ್ಥಿನಿಯೋರ್ವಳು ಕಾಲೇಜಿನ ಐದನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನದಲ್ಲಿ ನಡೆದಿದೆ.
ಚೆನ್ನರಾಯಪಟ್ಟಣ ತಾಲೂಕಿನ ದಂಡಿಗನಹಳ್ಳಿ ಹೋಬಳಿಯ ಹೊನ್ನಶೆಟ್ಟಿ ಹಳ್ಳಿಯ ಮಾನ್ಯ (19) ಈ ಕೃತ್ಯ ಎಸಗಿದವರು.
ಹಾಸನದ ಹೊವಲಯದ ಕಾಲೇಜೊಂದರಲ್ಲಿ ಪ್ರಥಮ ವರ್ಷದ ಎಲೆಕ್ಟ್ರಾನಿಕ್ಸ್ & ಕಮ್ಯೂನಿಕೇಷನ್ ಎಂಜಿನಿಯರಿಂಗ್ ಓದುತ್ತಿದ್ದ ಮಾನ್ಯ ಮೊದಲ ಪರೀಕ್ಷೆ ಬರೆದಿದ್ದು, ಪರೀಕ್ಷೆಯಲ್ಲಿ ನಕಲು ಮಾಡಿದ ಹಿನ್ನಲೆಯಲ್ಲಿ ಕಾಲೇಜು ಪ್ರಾಂಶುಪಾಲರಿಗೆ ಕ್ಷಮಾಪಣೆ ಪತ್ರ ಬರೆದುಕೊಡುವಂತೆ ಉಪನ್ಯಾಸಕರೊಬ್ಬರು ಹೇಳಿದ್ದರು. ಈ ಬೆನ್ನಲ್ಲೇ ಮಾನ್ಯ ಕಾಲೇಜಿನ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಬಡಾವಣೆ ಪೊಲೀಸ್ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.