ಮಂಗಳೂರು: ಸುಳ್ಯದ ತಾಲೂಕಿನ ಬೆಳ್ಳಾರೆಯಲ್ಲಿ ನಡೆದ ಮಸೂದ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಜೈಲು ಸೇರಿದ್ದ ಇಬ್ಬರು ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿದೆ.
2022 ರ ಜುಲೈಯಲ್ಲಿ ಬೆಳ್ಳಾರೆ ಸಮೀಪದ ಕಳೆಂಜ ಎಂಬಲ್ಲಿ ಮಸೂದ್ ಕೊಲೆ ಕೃತ್ಯ ನಡೆದಿತ್ತು. ಎಂಟು ಆರೋಪಿಗಳ ಪೈಕಿ ಅಭಿಲಾಷ್ ಮತ್ತು ಸುನಿಲ್ ಇವರಿಗೆ ಈಗ ಜಾಮೀನು ಲಭಿಸಿದೆ. ಆರು ಮಂದಿಗೆ ಈ ಮೊದಲೇ ಜಾಮೀನು ಸಿಕ್ಕಿತ್ತು.
ಜಾಮೀನು ಅರ್ಜಿಯನ್ನು ಪರಿಗಣಿಸಿದ ಕರ್ನಾಟಕದ ಉಚ್ಚ ನ್ಯಾಯಾಲಯದ ಏಕಸದಸ್ಯ ಪೀಠದ ಜಸ್ಟಿಸ್ ವಿಶ್ವಜೀತ್ ಎಸ್ ಶೆಟ್ಟಿ, ಒಂದು ವರ್ಷದ ಮೇಲೆ ಆರೋಪಿಯಾಗಿ ಜೈಲಿನಲ್ಲಿದ್ದಾರೆಂಬ ವಾದಕ್ಕೆ ಪುರಸ್ಕರಿಸಿದ್ದಾರೆ. ಆರೋಪಿಗಳ ಪರವಾಗಿ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿದ್ದರು. ವಕೀಲರಾದ ಸುಯೋಗ್ ಹೇರಳೆ ಮತ್ತು ನಿಶಾಂತ್ ಕುಶಾಲಪ್ಪ ವಕಾಲತ್ತು ವಹಿದ್ದರು.