ಉಜಿರೆ: ವಿವಾಹಿತ ಮಹಿಳೆಯೊಬ್ಬರ ಶವ ಬಾವಿಯಲ್ಲಿ ಪತ್ತೆಯಾಗಿರುವ ಘಟನೆ ಉಜಿರೆ ಗ್ರಾಮದ ಗಡಿ ಪ್ರದೇಶವಾದ ಮಾಚಾರು ಸಮೀಪದ ಕೆಂಪನೊಟ್ಟುವಿನಲ್ಲಿ ಶುಕ್ರವಾರ ನಡೆದಿದೆ.
ಮಾಚಾರು ನಿವಾಸಿ ಶಶಿಕಲಾ ಎಂಬವರ ಶವವೇ ಬಾವಿಯಲ್ಲಿ ಅನುಮಾನಾಸ್ಪದವಾಗಿ ಪತ್ತೆಯಾಗಿರುವುದು. ಹತ್ಯೆ ಮಾಡಿ ಬಾವಿಗೆ ಹಾಕಿರುವ ಕುರಿತು ಆರೋಪಗಳು ಸಾರ್ವಜನಿಕ ವಲಯದಿಂದ ಕೇಳಿಬರುತ್ತಿದೆ.
ಇದು ಆಕಸ್ಮಿಕ ಘಟನೆಯೇ ಅಥವಾ ಕೊಲೆಯೇ ಎಂಬ ಬಗ್ಗೆ ಪೊಲೀಸ್ ತನಿಖೆಯಿಂದಷ್ಟೇ ತಿಳಿದು ಬರಬೇಕಿದೆ. ಧರ್ಮಸ್ಥಳ ಠಾಣಾ ಪೊಲೀಸರು, ಉನ್ನತಾಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ.