ಪುತ್ತೂರು: ಬಿಹಾರದ ಸರಸ್ವತಿ ವಿದ್ಯಾಮಂದಿರ ಬೆಟ್ಟಯ್ಯದಲ್ಲಿ ನಡೆಯುತ್ತಿರುವ ವಿದ್ಯಾಭಾರತಿ ರಾಷ್ಟ್ರಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ನಿಹಾಲ್ ರಾಜ್ ಲಾಂಗ್ ಜಂಪ್ ಸ್ಪರ್ಧೆಯಲ್ಲಿ ಬೆಳ್ಳಿಯ ಪದಕವನ್ನು ಪಡೆದುಕೊಂಡಿದ್ದಾರೆ.
ಅವರು ಕಬಕ ನಿವಾಸಿ ಬಿ. ನಾಗರಾಜ್ ಹೆಗ್ಡೆ ಮತ್ತು ಭಾನುಮತಿ ದಂಪತಿ
ಅವರ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.
























