ಉಡುಪಿ: ಬಾಲಕಿಯೊಬ್ಬಳು ಫ್ಲ್ಯಾಟ್ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ಉಡುಪಿ ಜಿಲ್ಲೆಯ ಹೆರ್ಗ ಸಮೀಪದ ಫ್ಲ್ಯಾಟ್ ಒಂದರಲ್ಲಿ ನಡೆದಿದೆ.
ಪ್ರಜ್ಞಾ(13) ಆತ್ಮಹತ್ಯೆ ಮಾಡಿಕೊಂಡ ಬಾಲಕಿ.
ಮಣಿಪಾಲದ ಖಾಸಗಿ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದ ಪ್ರಜ್ಞಾ, ಬಾಲಕಿ ಇತ್ತೀಚಿನ ಕೆಲ ತಿಂಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದಳು ಎಂದು ಹೇಳಲಾಗಿದೆ. ಫ್ಲ್ಯಾಟ್ ಒಂದರ ಎಂಟನೇ ಮಹಹಡಿಯಿಂದ ಜಿಗಿದ ಬಾಲಕಿ ನೆಲಕ್ಕೆ ಅಪ್ಪಳಿಸಿ ಗಂಭೀರ ಗಾಯಗೊಂಡಿದ್ದರು. ತಕ್ಷಣ ಪೋಷಕರು ಆಕೆಯನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.