ಪುತ್ತೂರು: ಪುತ್ತೂರು ನಗರಸಭೆ, ಸಮರ್ಪಣಾ ಚಾರಿಟೇಬಲ್ ಟ್ರಸ್ಟ್, ನಗರಸಭೆ ಪೌರಸೇವಾ ನೌಕರರ ಸಂಘ ಹಾಗೂ ಸುಳ್ಯ ಕೆವಿಜಿ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆ ಸಹಯೋಗದೊಂದಿಗೆ ಪೌರ ಕಾರ್ಮಿಕರು ಹಾಗೂ ಪೌರ ಸೇವಾ ನೌಕರರಿಗೆ ವೈದ್ಯಕೀಯ ತಪಾಸಣಾ ಶಿಬಿರ ನ.8 ಬುಧವಾರ ಪುತ್ತೂರು ನಗರಸಸಭೆ ಸಭಾಂಗಣದಲ್ಲಿ ನಡೆಯಲಿದೆ.
ಬೆಳಿಗ್ಗೆ 9 ರಿಂದ ಆರಂಭಗೊಂಡು ಮಧ್ಯಾಹ್ನ 1 ಗಂಟೆ ತನಕ ನಡೆಯುವ ಶಿಬಿರದಲ್ಲಿ ಜನರಲ್ ಮೆಡಿಸಿನ್, ಶಸ್ತ್ರ ಚಿಕಿತ್ಸೆ, ಮಕ್ಕಳ ರೋಗ, ಗಂಟಲು, ಮೂಗು, ಕಿವಿ, ಥೈರಾಯಿಡ್ ಸೋರುವಿಕೆ, ನೇತ್ರ ಚಿಕಿತ್ಸೆ, ಚರ್ಮ ಹಾಗೂ ಲೈಂಗಿಕ, ಸ್ತ್ರೀರೋಗ, ಎಲುಬು ಮತ್ತು ಕೀಲು ಸಂಬಂಧಿತ ಖಾಯಿಲೆ, ಶ್ವಾಸಕೋಶ ಮುಂತಾದ ಕಾಯಿಲೆಗಳಿಗೆ ತಜ್ಞ ವೈದ್ಯರಿಂದ ತಪಾಸಣೆ ಹಾಗೂ ಚಿಕಿತ್ಸೆ ನೀಡಲಾಗುವುದು.
ಪೌರ ಕಾರ್ಮಿಕರು ಹಾಗೂ ಸಿಬ್ಬಂದಿಗಳು ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕೆಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.