ಪುತ್ತೂರು: ರೈ ಎಸ್ಟೇಟ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನ. 13ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿನಡೆಯಲಿರುವ ವಸ್ತ್ರ ವಿತರಣೆ ಹಾಗೂ ಸಹಭೋಜನ ಕಾರ್ಯಕ್ರಮದಲ್ಲಿ ಸಾವಿರಾರು ಮಂದಿ ಸೇರುವ ನಿರೀಕ್ಷೆ ಇದ್ದು ಟ್ರಾಫಿಕ್ ವ್ಯವಸ್ಥೆಯ ಬಗ್ಗೆ ಸಮಾಲೋಚನೆ ನಡೆಸಲಾಯಿತು.
ಕ್ರೀಡಾಂಗಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಬ್ ಇನ್ಸ್ ಪೆಕ್ಟರ್ ಉದಯ ರವಿ ಅವರು ಟ್ರಸ್ಟ್ ಕಾರ್ಯಾಧ್ಯಕ್ಷ ಸುದೇಶ್ ಶೆಟ್ಟಿ ಅವರಿಂದ ಮಾಹಿತಿ ಪಡೆದುಕೊಂಡರು.
50 ಸಾವಿರಕ್ಕೂಮಿಕ್ಕಿ ಜನರು ಕಾರ್ಯಕ್ರಮದಲ್ಲಿಭಾಗವಹಿಸುವ ನಿರೀಕ್ಷೆಯಿದ್ದು, ಟ್ರಾಫಿಕ್ ಜಾಮ್ ಆಗುವ ಸಂಭವ ಇದೆ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗದಂತೆ ಎಲ್ಲಾ ವ್ಯವಸ್ಥೆಗಳನ್ನು ಕೈಗೊಳ್ಳುವಂತೆ ಸುದೇಶ್ ಶೆಟ್ಟಿ ಮನವಿ ಮಾಡಿದರು.