ಪುತ್ತೂರು: ಮುಕ್ರಂಪಾಡಿಯಲ್ಲಿರುವ ಪುತ್ತಿಲ ಪರಿವಾರ ಕಚೇರಿ ಮುಂಭಾಗದಲ್ಲಿ ಯುವಕನೋರ್ವ ತಲವಾರು ಹಿಡಿದು ಬೊಬ್ಬೆ ಹೊಡೆದ ಘಟನೆ ಶುಕ್ರವಾರ ನಡೆದಿದೆ.
ಈ ಘಟನೆ ಪುತ್ತೂರು ನಗರ ಠಾಣಾ ಪೊಲೀಸರಿಗೆ ಮಾಹಿತಿ ತಿಳಿಯುತ್ತಿದ್ದಂತೆ ಪುತ್ತೂರು ನಗರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅರುಣ್ ಪುತ್ತಿಲ ಬೆಂಬಲಿಗರಾದ ಮನೀಶ್ ಕುಲಾಲ್ ಬನ್ನೂರು ಅವರನ್ನು ಗುರಿಯಾಗಿಟ್ಟುಗೊಂಡು ದಿನೇಶ್ ಪಂಜಿಗ ಎಂಬಾತ ನಾಲ್ವರು ಯುವಕರೊಂದಿಗೆ ತಲವಾರು ಹಿಡಿದುಕೊಂಡು ಆಗಮಿಸಿದ್ದ ಎನ್ನಲಾಗಿದೆ. ಪುತ್ತಿಲ ಕಚೇರಿಯಲ್ಲಿ ಕೃಷ್ಣಪ್ರಸಾದ್ ಶೆಟ್ಟಿ ಮತ್ತಿತರರು ಇದ್ದರು. ಮನೀಶ್ ಕುಲಾಲ್ ಕಚೇರಿಯಲ್ಲಿ ಇರಲಿಲ್ಲ. ಮಾಹಿತಿ ತಿಳಿದ ಮನೀಶ್ ಕುಲಾಲ್ ಪೊಲೀಸರಿಗೆ ಮಾಹಿತಿ ನೀಡಿದ್ದರು. ತಕ್ಷಣ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಯುವಕರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ವಾಟ್ಸಾಪ್ ಗ್ರೂಪ್ನಲ್ಲಿ ನಡೆದ ಚರ್ಚೆಯ ಕೋಪದಲ್ಲಿ ಈ ಕೃತ್ಯ ನಡೆದಿದೆ. ಹಾಡಹಗಲೇ ತಲವಾರು ಹಿಡಿದುಕೊಂಡು ಪರಿಸ್ಥಿತಿಯಲ್ಲಿ ಉಂಟಾಗಿರುವುದು ಜನರ ಆತಂಕ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ ಎನ್ನಲಾಗಿದೆ.