ಕುಂಬ್ರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ : ಸಜಂಕಾಡಿ ಸರಕಾರಿ ಶಾಲೆಯ ನಾಲ್ವರು ತಾಲೂಕು ಮಟ್ಟಕ್ಕೆ ಆಯ್ಕೆ

ಪುತ್ತೂರು: ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಪುತ್ತೂರು ಹಾಗೂ ಕುಂಬ್ರ ಸಮೂಹ ಸಂಪನ್ಮೂಲ ಕೇಂದ್ರದ ಆಶ್ರಯದಲ್ಲಿ ಪಟ್ಟೆ ಶ್ರೀಕೃಷ್ಣ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ 2023-24 ನೇ ಸಾಲಿನ ಕುಂಬ್ರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ಯಲ್ಲಿ ಸಜಂಕಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ನಾಲ್ವರು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಶಾಲಾ ವಿದ್ಯಾರ್ಥಿಗಳಾದ 6ನೇ ತರಗತಿಯ ಮಹಮ್ಮದ್ ಹಿಶಾಮ್ ಆಶುಭಾಷಣದಲ್ಲಿ ಪ್ರಥಮ, 3ನೇ ತರಗತಿಯ ಫಾತಿಮತ್ತ್ ಅಫೀಪ ಧಾರ್ಮಿಕ ಫಠಣ ಅರೇಬಿಕ್ ನಲ್ಲಿ ಪ್ರಥಮ, 4ನೇ ತರಗತಿಯ ಫಾತಿಮತ್ ಪಾಝಿಲ ಇಂಗ್ಲೀಷ್ ಕಂಠಪಾಠ ಸ್ಪರ್ಧೆ ಯಲ್ಲಿ ಪ್ರಥಮ, 5ನೇ ತರಗತಿಯ ಜೈಪ್ರೀತ್ ಮಿಮಿಕ್ರಿ ಯಲ್ಲಿ ಪ್ರಥಮ, 5ನೇ ತರಗತಿಯ ಆಶಿಷತ್ ಶಿಮಾ ಅಭಿನಯ ಗೀತೆಯಲ್ಲಿ ದ್ವಿತೀಯ, 6ನೇ ತರಗತಿಯ ಕೆ .ಮೂಸಾ ಆಸಫ್ ಲಘು ಸಂಗೀತದಲ್ಲಿ ದ್ವಿತೀಯ ಸ್ಥಾನ ಪಡೆಕೊಂಡಿದ್ದಾರೆ.

ಶಾಲೆಯ 4 ಮಂದಿ  ಕ್ಲಸ್ಟರ್ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಶಾಲಾ ಮುಖ್ಯ ಶಿಕ್ಷಕರು, ಶಿಕ್ಷಕರು, ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.





















































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top