ಬೆಂಗಳೂರು: ಸರ್ಕಾರಿ ಬಸ್ ಹಾಗೂ ಓಮ್ಮಿ ಬಸ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಐವರು ಮೃತಪಟ್ಟು 60 ಪ್ರಯಾಣಿಕರು ಗಾಯಗೊಂಡಿರುವ ಘಟನೆ ಚೆನ್ನೈ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಘಟನೆಯಿಂದ ಎರಡೂ ವಾಹನಗಳ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಸುಮಾರು 10 ಅಂಬುಲೆನ್ಸ್ಗಳಲ್ಲಿ ಗಾಯಾಳುಗಳನ್ನು ಆಸ್ಪತ್ರೆಗಳಿಗೆ ತಲುಪಿಸಲು ಸಹಾಯ ಮಾಡಿದ್ದು, ಸಮೀಪದ ಚೆಟ್ಟಿಯಪ್ಪನೂರಿನಲ್ಲಿ ಬೆಂಗಳೂರಿನಿಂದ ಚೆನ್ನೈಗೆ ತೆರಳುತ್ತಿದ್ದ ರಾಜ್ಯ ಎಕ್ಸ್ಪ್ರೆಸ್ ಸಾರಿಗೆ ಸಂಸ್ಥೆಯ ಬಸ್ ಮತ್ತು ಚೆನ್ನೈನಿಂದ ಬೆಂಗಳೂರಿಗೆ ಬರುತ್ತಿದ್ದ ಓನ್ನಿಬಸ್ ನಡುವೆ ಅಪಘಾತ ಸಂಭವಿಸಿದ್ದು ಓರ್ವ ಮಹಿಳೆ ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ.
ಗುಡುವಂಚೇರಿಯ ರಿತಿಕಾ (32), ವಾಣಿಯಂಬಾಡಿಯ ಮೊಹಮ್ಮದ್ ಫಿರೋಜ್ (37), ಎಸ್ಇಟಿಸಿ ಬಸ್ ಚಾಲಕ ಕೆ ಎಲುಮಲೈ (47) ಮತ್ತು ಚಿತ್ತೂರಿನ ಬಿ ಅಜಿತ್ (25), ಓಮ್ಮಿಬಸ್ ಚಾಲಕ ಎನ್ ಸೈಯದ್ ಮೃತಪಟ್ಟವರು. ಗಾಯಾಳುಗಳನ್ನು ತಿರುಪತ್ತೂರು ಜಿಲ್ಲೆಯ ವಾಣಿಯಂಬಾಡಿ ಸರ್ಕಾರಿ ಆಸ್ಪತ್ರೆಗೆ ಮತ್ತು ವೆಲ್ಲೂರಿನ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ
























