ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಕಣ್ಣಿನ ಆಸ್ಪತ್ರೆ ಹಾಗೂ ಪ್ರಸಾದ್ ನೇತ್ರಾಲಯದ ಜಂಟಿ ಆಶ್ರಯದಲ್ಲಿ ‘ಉಚಿತ ನೇತ್ರ ತಪಾಸಣಾ ಶಿಬಿರ’ ನ.19 ರಂದು ಪುತ್ತೂರು ಜೈನಭವನದಲ್ಲಿ ನಡೆಯಲಿದೆ.
ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 1 ಗಂಟೆ ತನಕ ನಡೆಯುವ ಶಿಬಿರವನ್ನು ರೋಟರಿ ಕ್ಲಬ್ ಜಿಲ್ಲಾ 3150 ರ ಆರ್‍ಐ ಉದಯ್ ಪಿಲಾನಿ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ರೋಟರಿ ಜಿಲ್ಲಾ 3181 ರ ಜಿಲ್ಲಾ ಗವರ್ನರ್ ಎಚ್.ಆರ್.ಕೇಶವ್, ಜಿಲ್ಲಾ 3150 ರ ಪಿಡಿಜಿ ಆರ್.ಐ ರಮೇಶ್ ವಂಗಾಲ, ಜಿಲ್ಲಾ 3181 ರ ಪ್ರಕಾಶ್ ಕಾರಂತ್, ಜಿಲ್ಲಾ 3181 ರ ಡಿಆರ್ ಎಫ್‍ಸಿ ಡಾ.ಸೂರ್ಯನಾರಾಯಣ, ಪ್ರಸಾದ್ ನೇತ್ರಾಲಯದ ಡಾ.ವಿಕ್ರಮ್ ಜೈನ್ ಪಾಲ್ಗೊಳ್ಳಲಿದ್ದಾರೆ.
ಶಿಬಿರದಲ್ಲಿ ಕಣ್ಣಿನ ಸಂಪೂರ್ಣ ತಪಾಸಣೆ, ಅಗತ್ಯವುಳ್ಳವರಿಗೆ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ ಉಚಿತವಾಗಿ ಮಾಡಲಾಗುವುದು. ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆಯನ್ನು ಉಚಿತವಾಗಿ ಪುತ್ತೂರು ರೋಟರಿ ಕಣ್ಣಿನ ಆಸ್ಪತ್ರೆಯಲ್ಲಿ ನಿಗದಿಪಡಿಸಿದ ದಿನಾಂಕಗಳಲ್ಲಿ ಮಾಡಲಾಗುವುದು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಶಿಬಿರದ ಪ್ರಯೋಜನ ಪಡೆದುಕೊಳ್ಳುವಂತೆ ಎಂದು ಪ್ರಕಟಣೆ ತಿಳಿಸಿದೆ.