ಬೆಳ್ಳಾರೆ: ಮೂತ್ರ ವಿಸರ್ಜನೆಗೆ ತೆರಳಿದ್ದ 7 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಘಟನೆ ಕಡಬ ತಾಲೂಕಿನ ಕಾಣಿಯೂರಿನಲ್ಲಿ ನಡೆದಿದೆ.
ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ನಾಗೇಶ (24) ಈ ಕೃತ್ಯ ಎಸಗಿ ಬಂಧಿತನಾದ ಆರೋಪಿ.
ಮಹಾರಾಷ್ಟ್ರದ ಕೂಲಿ ಕಾರ್ಮಿರರೋರ್ವರ ಏಳು ವರ್ಷದ ಮಗಳು ಮೂತ್ರ ವಿಸರ್ಜನೆಗೆ ತೆರಳಿದ್ದ ವೇಳೆ ಅತ್ಯಾಚಾರ ನಡೆಸಿದ್ದಾನೆ ಎನ್ನಲಾಗಿದೆ. ಅತ್ಯಾಚಾರದ ಬಳಿಕ ಬಾಲಕಿಗೆ ರಕ್ತಸ್ರಾವವಾಗಿ ತೀವ್ರವಾಗಿ ಅಸ್ವಸ್ಥಗೊಂಡಿದ್ದಾಳೆ. ಈ ವೇಳೆ ಪ್ರಕರಣ ಬಯಲಾಗಿದೆ. ಈ ಕುರಿತು ಬಾಲಕಿಯ ಪೋಷಕರು ಬೆಳ್ಳಾರೆ ಠಾಣೆಗೆ ದೂರು ನೀಡಿದ್ದು, ಆರೋಪಿಯನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.