ನ.17: ದ.ಕ.ಜಿಲ್ಲಾ ಜಮಾಅತೆ ಇಸ್ಲಾಮೀ ಹಿಂದ್ ವತಿಯಿಂದ ‘ಸೀರತ್ ಸಮಾವೇಶ’

ಪುತ್ತೂರು: ದ.ಕ.ಜಿಲ್ಲೆ ಜಮಾಅತೆ ಇಸ್ಲಾಮೀ ಹಿಂದ್ ವತಿಯಿಂದ ಸಾರ್ವಜನಿಕ ಸೀರತ್ ಸಮಾವೇಶ ನ.17 ರಂದು ಸಂಜೆ 6.30 ಕ್ಕೆ ಪುತ್ತೂರು ಪುರಭವನದಲ್ಲಿ ನಡೆಯಲಿದೆ ಎಂದು ಜಮಾಅತೆ ಇಸ್ಲಾಮೀ ಹಿಂದ್ ಮಂಗಳೂರು ವಲಯ ಉಪಸಂಚಾಲಕ ಅಮೀನ್ ಅಹ್ಸನ್ ಹೇಳಿದರು.

ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಸಮಾವೇಶ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಶಾಸಕ ಅಶೋಕ್ ಕುಮಾರ್ ರೈ, ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್, ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಡಾ.ಸಿ.ಎಸ್.ದ್ವಾರಕನಾಥ್, ಸಾಹಿತಿ ಲಕ್ಷ್ಮೀಶ ತೋಳ್ಪಾಡಿ, ಜಮಾಅತೆ ಇಸ್ಲಾಮೀ ಹಿಂದ್ ರಾಜ್ಯ ಕಾರ್ಯದರ್ಶಿ ಜ.ಮುಹಮ್ಮದ್ ಕುಂಞಿ, ಮಾಜಿ ಶಾಸಕ ಸಂಜೀವ ಮಠಂದೂರು, ಯುವವಾಹಿನಿ ಕೇಂದ್ರೀಯ ಸಮಿತಿ ಮಾಜಿ ಅಧ್ಯಕ್ಷ ಡಾ.ರಾಜಾರಾಮ ಕೆ.ಬಿ. ಪಾಲ್ಗೊಳ್ಳಲಿದ್ದಾರೆ. ಜಮಾಅತೆ ಇಸ್ಲಾಮೀ ಹಿಂದ್ ಜಿಲ್ಲಾಧ್ಯಕ್ಷ ಸಿ.ಎ.ಮುಹಮ್ಮದ್ ಇಸ್ಹಾಕ್ ಅಧ್ಯಕ್ಷತೆ ವಹಿಸುವರು ಎಂದು ಅವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಜಮಾಅತೆ ಇಸ್ಲಾಮೀ ಹಿಂದ್ ವಿಟ್ಲ ಅಧ್ಯಕ್ಷ ಹೈದರ್ ಅಲಿ ನೀರ್ಕಜೆ, ಸಮಾವೇಶ ಸಂಚಾಲಕ ರಿಯಾಝ್‍ ಹಾರೂನ್, ಉಪಸಂಚಾಲಕ ಅಬ್ದುಲ್ ಮಜೀದ್ ಕೆ.ಪಿ., ಜಮಾಅತೆ ಇಸ್ಲಾಮೀ ಹಿಂದ್ ಪುತ್ತೂರು ಸಂಚಾಲಕ ಇಬ್ರಾಹಿಂ ಬನ್ನೂರು, ಇಸ್ಮಾಯಿಲ್ ಇಕ್ಬಾಲ್ ಉಪಸ್ಥಿತರಿದ್ದರು.



































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top