ಮಕ್ಕಳ ಸಾಹಿತ್ಯ ಸಮ್ಮೇಳನ: ಗೋಷ್ಠಿಗಳಿಗೆ ಅರ್ಜಿ ಆಹ್ವಾನ

ಪುತ್ತೂರು: ತಾಲೂಕು ಮಕ್ಕಳ ಸಾಹಿತ್ಯ ಸಮ್ಮೇಳನ ಡಿಸೆಂಬರ್ 20ರಂದು ಬಪ್ಪಳಿಗೆ ಅಂಬಿಕಾ ಕೇಂದ್ರೀಯ ವಿದ್ಯಾಲಯದ ಸಹಯೋಗದಲ್ಲಿ ನಡೆಯಲಿದ್ದು, ಸಮ್ಮೇಳನದಲ್ಲಿ ಪುತ್ತೂರು ತಾಲೂಕಿನಲ್ಲಿ ಅಧ್ಯಯನ ಮಾಡುತ್ತಿರುವ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಲು ಅವಕಾಶವಿದೆ.

ಸಾಹಿತ್ಯ ಸಮ್ಮೇಳನದಲ್ಲಿ ಕವಿಗೋಷ್ಠಿ ಮಾತ್ರವಲ್ಲದೆ ಪ್ರಸ್ತುತ ಶಿಕ್ಷಣ ವ್ಯವಸ್ಥೆ, ಆಧುನಿಕ ತಂತ್ರಜ್ಞಾನದ ಬಳಕೆ, ನಾನು ಮೆಚ್ಚುವ ಶಿಕ್ಷಕ, ರಾಷ್ಟ್ರ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರ ಇತ್ಯಾದಿ ವಿಷಯಗಳಲ್ಲಿ ವಿಚಾರಗೋಷ್ಠಿ ಹಾಗೂ ಚರ್ಚಾ ಕೂಟಗಳು ನಡೆಯಲಿವೆ.

ಸಾಹಿತ್ಯ ಲೋಕಕ್ಕೆ ಉತ್ತಮ ಸಾಹಿತಿಗಳನ್ನು ಹಾಗೂ ವಾಗ್ಮಿಗಳನ್ನು ಕೊಡುಗೆಯಾಗಿ ನೀಡುವ ನಿಟ್ಟಿನಲ್ಲಿ ಮಕ್ಕಳ ಸಾಹಿತ್ಯ ಸಮ್ಮೇಳನದ ಎಲ್ಲಾ ಪ್ರಮುಖ ಸ್ಥಾನಗಳನ್ನು ವಿದ್ಯಾರ್ಥಿಗಳಿಗೆ ನೀಡುವ ಯೋಜನೆಯನ್ನು ರೂಪಿಸಲಾಗಿದೆ.  ಆದ್ದರಿಂದ ಮಕ್ಕಳ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಸ್ಥಾನ, ಮಕ್ಕಳ ಸಾಹಿತ್ಯ ಸಮ್ಮೇಳನದ ಸಮಾರೋಪ ಭಾಷಣ, ಕವಿಗೋಷ್ಠಿಯ ಅಧ್ಯಕ್ಷತೆ, ವಿಚಾರಗೋಷ್ಠಿಯ ಅಧ್ಯಕ್ಷತೆಗೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.



































 
 

ಮಾತ್ರವಲ್ಲದೇ, ಕವಿ ಗೋಷ್ಠಿಯಲ್ಲಿ ಭಾಗವಹಿಸುವ  ಯುವ ಕವಿಗಳು  (10 ವಿದ್ಯಾರ್ಥಿಗಳಿಗೆ ಅವಕಾಶ), ವಿಚಾರಗೋಷ್ಠಿಯಲ್ಲಿ  ಭಾಗವಹಿಸುವ ವಿದ್ಯಾರ್ಥಿಗಳು (8 ವಿದ್ಯಾರ್ಥಿಗಳಿಗೆ ಅವಕಾಶ), ಸಾಂಸ್ಕೃತಿಕ ಕಾರ್ಯಕ್ರಮ ನೀಡಲು  (3 ತಂಡಗಳಿಗೆ ಅವಕಾಶ) ಅವಕಾಶವಿದೆ. ಪುತ್ತೂರು ತಾಲೂಕಿನಲ್ಲಿ ಅಧ್ಯಯನ ಮಾಡುತ್ತಿರುವ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜು ಸಾಹಿತ್ಯಾಸಕ್ತ ವಿದ್ಯಾರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು  ತಮ್ಮ ಹೆಸರು, ಶಾಲೆಯ ಹೆಸರು, ಊರು, ಆಸಕ್ತ ಸ್ಥಾನದ ವಿವರವನ್ನು 30 ಸೆಕೆಂಡ್ ವಿಡಿಯೋ ಮಾಡಿ ತಮ್ಮ ಶಾಲಾ ಮುಖ್ಯಸ್ಥರ ಮೂಲಕ  ಮಲ್ಲಿಕಾ  ಅವರ 9482760480 ವಾಟ್ಸಪ್ಪ್ ಸಂಖ್ಯೆಗೆ ಕಳುಹಿಸಿಕೊಡಬೇಕು. ಕೊನೆ ದಿನಾಂಕ ನವಂಬರ್ 30 ಎಂದು ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್  ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top