ಎನ್‍ ಕೌಂಟರ್ ಗೆ ರಶೀದ್ ಕಾಲಿಯಾ ಬಲಿ

ಉತ್ತರಪ್ರದೇಶ: 40 ಕೊಲೆ ಪ್ರಕರಣ ಆರೋಪ ಎದುರಿಸುತ್ತಿದ್ದ ರಶೀದ್ ಕಾಲಿಯಾನನ್ನು  ಉತ್ತರ ಪ್ರದೇಶ ವಿಶೇಷ ಕಾರ್ಯಪಡೆ ಶನಿವಾರ ಹತ್ಯೆ ಮಾಡಿದೆ.

ಝಾನ್ಸಿ ಜಿಲ್ಲೆಯಲ್ಲಿ ನಡೆದ ಎನ್ ಕೌಂಟರ್ ನಲ್ಲಿ ರಶೀದ್‌ ಕಾಲಿಯಾನನ್ನು ಹತ್ಯೆ ಮಾಡಲಾಗಿದೆ.

ಪೊಲೀಸರು ಆತನ ತಲೆಗೆ 1.25 ಲಕ್ಷ ರೂ. ಬಹುಮಾನ ಘೋಷಿಸಿದ್ದರು. ಉತ್ತರ ಪ್ರದೇಶ ಪೊಲೀಸ್ ಮೂಲಗಳ ಪ್ರಕಾರ, ಕಾಲಿಯಾ ಝಾನ್ಸಿ ಜಿಲ್ಲೆಯ ಮೌರಾನಿಪುರದಲ್ಲಿ ಸುಪಾರಿ ಹತ್ಯೆಗಾಗಿ ಆಗಮಿಸಿದ್ದ ವೇಳೆ ಪೊಲೀಸರು ಎನ್ ಕೌಂಟರ್ ಮಾಡಿದ್ದಾರೆ. ಮೌರಾನಿಪುರದಲ್ಲಿ ಕಾಲಿಯಾ ಇರುವಿಕೆಯ ಬಗ್ಗೆ ಮಾಹಿತಿ ಪಡೆದು ತಕ್ಷಣ ಸ್ಥಳಕ್ಕೆ ಆಗಮಿಸಿದ ಯುಪಿ ಎಸ್ ಟಿಎಫ್ ಗುಂಡಿನ ದಾಳಿ ನಡೆಸಿದೆ. ಗುಂಡಿನ ಚಕಮಕಿಯಲ್ಲಿ, ಕಾಲಿಯಾ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ವೈದ್ಯರು ಕಾಲಿಯಾ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ.



































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top