ಸೇವಾ ಸೌರಭ ಕಾರ್ಯಕರ್ತರಿಗೆ ಅಭಿನಂದನೆ

ಪುತ್ತೂರು: ರೈ ಎಸ್ಟೇಟ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಡೆದ ವಸ್ತ್ರ ವಿತರಣಾ ಹಾಗೂ ಸಜಭೋಜನ ಕಾರ್ಯಕ್ರಮ ಯಶಸ್ವಿಯಾಗಲು ಟ್ರಸ್ಟಿನ ಸದಸ್ಯರು ಹಾಗೂ ಕಾರ್ಯಕರ್ತರ ಶ್ರಮವೇ ಕಾರಣ ಎಂದು ಟ್ರಸ್ಟ್ ಅಧ್ಯಕ್ಷ,  ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.

ಅವರು ಭಾನುವಾರ ಶಾಸಕರ ಕಚೇರಿ ಸಭಾಂಗಣದಲ್ಲಿ ನಡೆದ ಅಭಿನಂದನಾ ಸಭೆಯಲ್ಲಿ ಮಾತನಾಡಿದರು.

ಕಾರ್ಯಕರ್ತರು ಪ್ರತೀ ಗ್ರಾಮಕ್ಕೆ ತೆರಳಿ ಕಾರ್ಯಕ್ರಮಕ್ಕೆ ಆಹ್ವಾನ ನೀಡಿರುವುದು, ವೇದಿಕೆ ವ್ಯವಸ್ಥೆ, ಸಭಾಂಗಣ, ಊಟೋಪಚಾರದ ವ್ಯವಸ್ಥೆ ಎಲ್ಲವೂ ಅಚ್ಚುಕಟ್ಟಾಗಿ ನಡೆದಿದ್ದು ಇದಕ್ಕೆ ಕಾರಣಕರ್ತರಾದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುವುದಾಗಿ ಶಾಸಕರು ಹೇಳಿದರು.



































 
 

ಕಾರ್ಯಕ್ರಮದಲ್ಲಿ‌ ಭಾಗವಹಿಸಿದ್ದ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ರವರು ಕಾರ್ಯಕ್ರಮದಿಂದ ತೆರಳಿದ ಬಳಿಕ ಮೊಬೈಲ್ ಕರೆ ಮಾಡಿ ಇಷ್ಟೊಂದು ಜನ ಸೇರುವ ಕಾರ್ಯಕ್ರಮವಾಗಿದೆ ಎಂಬುದು ನನಗೆ ಗೊತ್ತಿರಲಿಲ್ಲ. ಈ ಕಾರ್ಯಕ್ರಮಕ್ಕೆ ಸಿಎಂ ಅವರನ್ನೇ ಕರೆಸಬೇಕಿತ್ತು. ಅಷ್ಟು ಜನ ಸೇರಿದ್ದರೂ ಎಲ್ಲವೂ ಅಚ್ಚುಕಟ್ಟಾಗಿ ನಡೆದಿರುವುದು ಅದ್ಭುತವಾಗಿದೆ ಎಂದು ನನಗೆ ಹೇಳಿದ್ದರು ಎಂದು ಶಾಸಕರು ಸಭೆಗೆ ತಿಳಿಸಿದರು.

ಮುಂದಿನ ದೀಪಾವಳಿಗೂ ಬಡವರ ಜೊತೆ ಸೇರಿಕೊಂಡು ಅದ್ದೂರಿಯ ಕಾರ್ಯಕ್ರಮ ಮಾಡಲಿದ್ದೇವೆ. ವರ್ಷದಲ್ಲಿ ‌5 ರಿಂದ 6 ಸಮಾಜಮುಖಿ ಕಾರ್ಯಕ್ರಮಗಳು ನಡೆಯಲಿದೆ. ಜನರಿಗೆ ಪ್ರಯೋಜನವಾಗುವ ಕಾರ್ಯಕ್ರಮಗಳು ನಿರಂತರವಾಗಿ ನಡೆಯಲಿದೆ ಎಂದು ಶಾಸಕರು ಹೇಳಿದರು.

ವೇದಿಕೆಯಲ್ಲಿ ಟ್ರಸ್ಟ್ ಮುಖ್ಯಸ್ಥೆ ಸುಮಾ ಅಶೋಕ್ ರೈ, ಕಾರ್ಯಾಧ್ಯಕ್ಷ ಸುದೇಶ್ ಶೆಟ್ಟಿ, ಸೀತಾರಾಮ ಶೆಟ್ಟಿ ಹೆಗ್ಡೆ ಹಿತ್ತಿಲು, ಟ್ರಸ್ಟ್ ನ ನಿಹಾಲ್ ಶೆಟ್ಟಿ ಕಲ್ಲಾರೆ, ನಿರಂಜನ್ ರೈ ಮಠಂತಬೆಟ್ಟು ಉಪಸ್ಥಿತರಿದ್ದರು. ಟ್ರಸ್ಟಿನ ಕಾರ್ಯಾಧ್ಯಕ್ಷರಾದ ಸುದೇಶ್ ಶೆಟ್ಟಿ ಸ್ವಾಗತಿಸಿದರು. ಬಾಲಕೃಷ್ಣ ರೈ ವಂದಿಸಿದರು. ಕಾರ್ಯಕ್ರಮದಲ್ಲಿ ಟ್ರಸ್ಟಿನ ಸದಸ್ಯರು, ಪದಾಧಿಕಾರಿಗಳು ಉಪಸ್ತಿತರಿದ್ದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top