ಬಿಡುಗಡೆ ಬೆನ್ನಲ್ಲೇ ಮುರುಘಾಶ್ರೀ ವಿರುದ್ಧ ಕೋರ್ಟ್​ನಿಂದ ಅರೆಸ್ಟ್ ವಾರಂಟ್ ಜಾರಿ!

ಚಿತ್ರದುರ್ಗ: ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಒಂದು ವರ್ಷ ಹಿಂದೆ ಜೈಲು ಪಾಲಾಗಿ ನಾಲ್ಕು ದಿನಗಳ ಹಿಂದೆ ಜಾಮೀನು ಮೇಲೆ ಹೊರಬಂದಿದ್ದ ಚಿತ್ರದುರ್ಗದ ಮರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶರಣರಿಗೆ ಮತ್ತೆ ಬಂಧನ ಭೀತಿ ಎದುರಾಗಿದೆ. 

ಚಿತ್ರದುರ್ಗದ 2ನೇ ಅಪರ ಜಿಲ್ಲಾ & ಸತ್ರ ನ್ಯಾಯಾಲಯದಿಂದ ಶರಣರ ವಿರುದ್ಧ ಅರೆಸ್ಟ್ ವಾರಂಟ್ ಜಾರಿಯಾಗಿದೆ. ಯಾವುದೇ ಕ್ಷಣದಲ್ಲಿ ಶಿವಮೂರ್ತಿ ಮುರುಘಾ ಶರಣರ ಬಂಧನವಾಗುವ ಸಾಧ್ಯತೆಯಿದೆ. 

2ನೇ ಪೋಕ್ಸೋ ಕೇಸ್​ನಲ್ಲಿ ಅರೆಸ್ಟ್ ವಾರಂಟ್​​ ಜಾರಿ ಮಾಡಿದ ಕೋರ್ಟ್​​, 1ನೇ ಪೋಕ್ಸೋ ಕೇಸ್​ನಲ್ಲಿ ಹೈಕೋರ್ಟ್​ನಿಂದ ಜಾಮೀನು ಹಿನ್ನೆಲೆ ಬಿಡುಗಡೆ ಮಾಡಲಾಗಿತ್ತು. ಈಗ ಮತ್ತೆ ಬಂಧನದ ಭೀತಿ ಎದುರಾಗಿದೆ.



































 
 

ಮಠದ ಸುತ್ತ ಬಿಗಿ ಭದ್ರತೆ: 

ಮುರುಘಾ ಶ್ರೀಗಳಿಗೆ ಅಪಾರ ಸಂಖ್ಯೆಯಲ್ಲಿ ಭಕ್ತರು, ಬೆಂಬಲಿಗರು ಇರುವುದರಿಂದ ಅಹಿತಕರ ಘಟನೆ ನಡೆಯದಂತೆ ಮಠದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top