ಕಾಂಗ್ರೆಸ್ನಿಂದ ತೀವ್ರ ವಿರೋಧ
ಬೆಂಗಳೂರು: ಟಿಪ್ಪು ನಿಜ ಕನಸುಗಳು ವಿವಾದಾತ್ಮಕ ನಾಟಕ ರಾಜ್ಯದಾದ್ಯಂತ ಸಂಚಲನ ಮೂಡಿಸಿರುವಾಗಲೇ ಬಿಜೆಪಿ ಇದೇ ಮಾದರಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಹಣಿಯಲು ಸಿದ್ದು ನಿಜ ಕನಸುಗಳು ಎಂಬ ಪುಸ್ತಕ ಸಿದ್ಧಪಡಿಸಿದೆ. ಇಂದು ಬೆಂಗಳೂರಿನಲ್ಲಿ ಪುಸ್ತಕ ಬಿಡುಗಡೆಯಾಗಲಿದ್ದು ಇದನ್ನು ಕಾಂಗ್ರೆಸ್ ತೀವ್ರರವಾಗಿ ವಿರೋಧಿಸಿ ತಡೆಯುವಂತೆ ಎಸ್ಜೆ ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಿದೆ.
ಪುಸ್ತಕ ಬಿಡುಗಡೆ ಹಿಂದೆ ದುರುದ್ದೇಶವಿದೆ. ಈ ಕಾರ್ಯಕ್ರಮಕ್ಕೆ ಅನುಮತಿ ನೀಡಿದ್ದರೆ ಅದನ್ನು ಕೂಡಲೇ ರದ್ದು ಮಾಡಬೇಕು. ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಕಾರ್ಯಕ್ರಮವನ್ನು ರದ್ದು ಮಾಡಲು ಆಯೋಜಕರಿಗೆ ಸೂಚನೆ ನೀಡಿ ಎಂದು ಎಸ್ಜೆ ಪಾರ್ಕ್ ಪೊಲೀಸ್ ಠಾಣೆಗೆ ಕೆಪಿಸಿಸಿ ವಕ್ತಾರ ಹಾಗೂ ಕಾನೂನು ವಿಭಾಗದ ಪ್ರಧಾನ ಕಾರ್ಯದರ್ಶಿ ಸೂರ್ಯ ಮುಕುಂದರಾಜ್ ದೂರು ಸಲ್ಲಿಸಿದ್ದಾರೆ.
ಇಂದು ಬೆಂಗಳೂರಿನ ಪುರಭವನದಲ್ಲಿ ಸಿದ್ದು ನಿಜ ಕನಸು ಪುಸ್ತಕವನ್ನು ಉನ್ನತ ಶಿಕ್ಷಣ ಸಚಿವ ಡಾ ಅಶ್ವಥ್ ನಾರಾಯಣ ಪುಸ್ತಕ ಬಿಡುಗಡೆ ಮಾಡಲಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿದ್ದ ಸಚಿವ ಅಶ್ವತ್ಥ್ ನಾರಾಯಣ “ಸಿದ್ದು ನಿಜ ಕನಸುಗಳು” ಎಂಬ ಪುಸ್ತಕದ ಮೂಲಕ ಹಲವು ಸೂಕ್ಷ್ಮ ವಿಷಯಗಳನ್ನು ಬಹಿರಂಗಪಡಿಸುವ ಜತೆ ಹಲವು ಪ್ರಶ್ನೆಗಳಿಗೆ ಉತ್ತರ ಹುಡುಕಿ ಕೊಡುವ ಪ್ರಯತ್ನ ಎಂದು ಶ್ಲಾಘಿಸಿದ್ದರು.