ಬೆಳ್ಳಾರೆ : ತಂದೆ-ತಾಯಿಯ ಮೇಲೆ ಮಗನೇ ಕತ್ತಿಯಿಂದ ಹಲ್ಲೆ ನಡೆಸಿದ ಘಟನೆ ಬೆಳ್ಳಾರೆ ಸಮೀಪದ ಕಲ್ಲಗುಡ್ಡೆ ಕೊಡಿಯಾಲದಲ್ಲಿ ನಡೆದಿದೆ.
ಬೆಳ್ಳಾರೆ ಸಮೀಪದ ಕಲ್ಲಗುಡ್ಡೆ ಕೊಡಿಯಾಳ ನಿವಾಸಿಗಳಾದ ಮಂಜುನಾಥ್, ಧರ್ಮಾವತಿ ಗಾಯಗೊಂಡ ದಂಪತಿಗಳು ಎಂದು ಗುರುತಿಸಲಾಗಿದೆ. ಪುತ್ರ ದೇವಿಪ್ರಸಾದ್ ಕತ್ತಿಯಿಂದ ಕಡಿದ ವ್ಯಕ್ತಿ.
ಜಾಗದ ವಿಚಾರವಾಗಿ ಮನೆಯಲ್ಲಿ ಜಗಳ ನಡೆದಿದ್ದು, ಈ ವೇಳೆ ಮಗ ತಂದೆ-ತಾಯಿ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿದ್ದು, ಗಂಭೀರ ಗಾಯಗೊಂಡ ಅವರನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.
ಆರೋಪಿಯ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ.