ಬೆಳ್ಳಾರೆ: ತಂದೆ-ತಾಯಿಯ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿದ ಆರೋಪಿ ಮಗನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ಜಾಗದ ವಿಚಾರಕ್ಕಾಗಿ ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದ ಕಲ್ಲಗದ್ದೆ ನಿವಾಸಿಗಳಾದ ಮಂಜುನಾಥ್ ಆಚಾರ್, ಧರ್ಮಾವತಿ ಅವರ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿದ್ದ ಎನ್ನಲಾಗಿದೆ. ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬೆಳ್ಳಾರೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಗಂಭೀರ ಗಾಯಗೊಂಡ ಮಂಜುನಾಥ್ ಆಚಾರ್ –ಧರ್ಮಾವತಿ ಅವರನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.