ಮಂಗಳೂರಿಗೆ ಆಗಮಿಸಿದ್ದ ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಸಂಸದ ನಳಿನ್ ಕುಮಾರ್ ಕಟೀಲ್ ಪರ ಬ್ಯಾಟ್ ಬೀಸಿದ್ದಾರೆ. ಈ ಮೂಲಕ ನಳಿನ್ ಕುಮಾರ್ ಕಟೀಲ್ ಅವರೇ ಮುಂದಿನ ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಕ್ಷೇತ್ರದ ಬಿಜೆಪಿ ಅಭ್ಯರ್ಥೀ ಎನ್ನುವುದನ್ನು ಸಾರಿದಂತಾಗಿದೆ.
ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಮತ್ತೆ ನಳಿನ್ ಕುಮಾರ್ ಕಟೀಲ್ ಅವರನ್ನು ಗೆಲ್ಲಿಸಿ ಕೊಡುವಂತೆ ಮನವಿ ಮಾಡಿಕೊಂಡಿದ್ದಾರೆ.
ಮುಂದಿನ ಲೋಕಸಭಾ ಚುನಾವಣೆಯನ್ನು ನಾವು ಗಂಭೀರವಾಗಿ ತೆಗೆದುಕೊಳ್ಳಬೇಕಿದೆ. ಮತ್ತೊಮ್ಮೆ ನಮ್ಮ ಪಕ್ಷದ ಅಭ್ಯರ್ಥಿಯಾದ ನಳಿನ್ ಕುಮಾರ್ ಕಟೀಲ್ ಅವರನ್ನು ಗೆಲ್ಲಿಸುವ ಕೆಲಸ ಮಾಡಬೇಕಿದೆ ಎಂದು ಹೇಳಿದ್ದಾರೆ.