ಬೆಳಂದೂರು: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾ ಕೋಶ, ಸಾಂಸ್ಕೃತಿಕ ಸಮಿತಿ ಮತ್ತು ಕನ್ನಡ ವಿಭಾಗದ ನೇತೃತ್ವದಲ್ಲಿ ಒಂದು ದಿನದ ರಂಗ ತರಬೇತಿ ಶಿಬಿರ ನಡೆಯಿತು.
ತರಬೇತುದಾರರಾಗಿ ಕಾಲೇಜಿನ ಹಿರಿಯ ವಿದ್ಯಾರ್ಥಿ, ರಂಗ ತರಬೇತುದಾರ ರಾಕೇಶ್ ಆಚಾರ್ಯ ಬನಾರಿ ಭಾಗವಹಿಸಿ, ವಿದ್ಯಾರ್ಥಿ ಜೀವನದಲ್ಲಿ ಪಠ್ಯೇತರ ಚಟುವಟಿಕೆಗಳ ಮಹತ್ವ ಮತ್ತು ಕಲೆಯೂ ಹೇಗೆ ವ್ಯಕ್ತಿತ್ವದ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂಬುದನ್ನು ತಿಳಿಸಿದರು.
ಕಾಲೇಜಿನ ಪ್ರಾಂಶುಪಾಲ ಡಾ.ಶಂಕರ ಭಟ್ ಪಿ. ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಐಕ್ಯುಎಸಿ ಸಂಚಾಲಕ ಸ್ವಾಮಿ ಎಸ್, ಸಾಂಸ್ಕೃತಿಕ ಸಮಿತಿ ಸಂಚಾಲಕಿ ದೀಪ್ತಿ ಎ.ಸಿ., ಕನ್ನಡ ವಿಭಾಗದ ಉಪನ್ಯಾಸಕಿ ರಶ್ಮಿ ಕೆ ಉಪಸ್ಥಿತರಿದ್ದರು.
ವಿದ್ಯಾರ್ಥಿ ಸಚಿನ್ ಸ್ವಾಗತಿಸಿದರು. ವಿದ್ಯಾರ್ಥಿನಿ ಚಂದ್ರಿಕ ಕಾರ್ಯಕ್ರಮ ನಿರೂಪಿಸಿದರು. ಭವನ್ ಸಂಪನ್ಮೂಲ ವ್ಯಕ್ತಿಗಳನ್ನು ಪರಿಚಯಿಸಿದರು. ವಿದ್ಯಾರ್ಥಿನಿ ಕೀರ್ತನ ವಂದಿಸಿದರು. ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಗೆ ರಂಗ ತರಬೇತಿ ನಡೆಯಿತು.