ಪುತ್ತೂರು: ಕಾಲೇಜು ವಿದ್ಯಾರ್ಥಿನಿಯೋರ್ವಳು ಕೀಟನಾಶಕ ಸೇವಿಸಿ ಮೃತಪಟ್ಟ ಘಟನೆ ನಡೆದಿದೆ.
ಸಂಪ್ಯ ಬೈಲಾಡಿ ನಿವಾಸಿ ಮಂಜಪ್ಪ ಗೌಡರ ಪುತ್ರಿ, ಪುತ್ತೂರಿನ ಖಾಸಗಿ ಕಾಲೇಜು ವಿದ್ಯಾರ್ಥಿನಿ ನಿಶಾ (17) ಮೃತಪಟ್ಟ ಯುವತಿ.
ಕಳೆದ ಎರಡು ವಾರಗಳ ಹಿಂದೆ ಬಿಹಾರದಲ್ಲಿ ನಡೆದಿದ್ದ ರಾಷ್ಟ್ರಮಟ್ಟದ ಕ್ರೀಡಾಕೂಟ ನಿಶಾ ರನ್ನಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ರನ್ನಿಂಗ್ ರೇಸ್ ನಲ್ಲಿ ಬಹುಮಾನ ಸಿಗದಿದ್ದಕ್ಕೆ ಬೇಸರಗೊಂಡಿದ್ದ ನಿಶಾ ಬಳಿಕ ಖಿನ್ನತೆಗೊಳಗಾಗಿ ತೋಟಕ್ಕೆ ಸಿಂಪಡಿಸುವ ಕೀಟನಾಶವನ್ನ ಸೇವಿಸಿದ್ದರು. ತೀವ್ರ ವಾಂತಿ ಬಂದ ಕಾರಣಕ್ಕೆ ಮನೆಯವರು ವಿಚಾರಿಸಿದಾಗ ಕೀಟನಾಶಕ ಸೇವಿಸಿದ ವಿಚಾರ ಬೆಳಕಿಗೆ ಕೂಡಲೇ ಪುತ್ತೂರಿನ ಆಸ್ಪತ್ರೆಗೆ ದಾಖಲಿಸಿದ್ದರು. ಪುತ್ತೂರಿನಿಂದ ಮಂಗಳೂರಿಗೆ ಕೊಂಡೊಯ್ಯುವಂತೆ ವೈದ್ಯರು ತಿಳಿಸಿದ್ದರು. ಕಳೆದ ಒಂದು ವಾರದಿಂದ ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಿಶಾ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮೃತಪಟ್ಟಿದ್ದಾರೆ. ಈ ಕುರಿತು ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.