ಪುತ್ತೂರು: ವಿವೇಕಾನಂದ ಸ್ವಾಯತ್ತ ಮಹಾವಿದ್ಯಾಲಯ, ಕಾಲೇಜಿನ ಕನ್ನಡ, ಸಂಸ್ಕೃತ ಹಾಗೂ ಲಲಿತಕಲಾ ಸಂಘ ಮತ್ತು ಐಕ್ಯೂಎಸಿ ಹಾಗೂ ಅಖಿಲ ಭಾರತೀಯ ಸಾಹಿತ್ಯ ಪರಿಷತ್ ತಾಲೂಕು ಸಮಿತಿ ಸಹಯೋಗದಲ್ಲಿ ಕನಕದಾಸ ಜಯಂತಿ ‘ದಾಸ ಸಾಹಿತ್ಯ-ಒಳನೋಟಗಳು’ ಒಂದು ದಿನದ ವಿಚಾರ ಸಂಕಿರಣ ನ. 30ರಂದು ಕಾಲೇಜಿನ ಸುವರ್ಣ ಮಹೋತ್ಸವ ಸಭಾಭವನದಲ್ಲಿ ನಡೆಯಲಿದೆ ಎಂದು ಅಖಿಲ ಭಾರತೀಯ ಸಾಹಿತ್ಯ ಪರಿಷತ್ ತಾಲೂಕು ಸಮಿತಿ ಅಧ್ಯಕ್ಷ ಡಾ.ಗಣರಾಜ ಕುಂಬ್ಳೆ ತಿಳಿಸಿದರು.
ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಿಗ್ಗೆ 9.30ಕ್ಕೆ ಕಾರ್ಯಕ್ರಮದ ಉದ್ಘಾಟನೆಯನ್ನು ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಡಾ.ಶ್ರೀಪತಿ ಕಲ್ಲೂರಾಯ ನೆರವೇರಿಸಲಿದ್ದು, ಅಖಿಲ ಭಾರತೀಯ ಸಾಹಿತ್ಯ ಪರಿಷತ್ ತಾಲೂಕು ಸಮಿತಿ ಅಧ್ಯಕ್ಷ ಡಾ.ಗಣರಾಜ ಕುಂಬ್ಳೆ ಅಧ್ಯಕ್ಷತೆ ವಹಿಸುವರು. ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಬೆಳ್ತಂಗಡಿ ತಾಲೂಕು ಸಮಿತಿ ಅಧ್ಯಕ್ಷ ಗಣಪತಿ ಭಟ್ ಕುಳಮರ್ವ ದಿಕ್ಸೂಚಿ ಭಾಷಣ ಮಾಡುವರು. ಉದ್ಘಾಟನಾ ಸಮಾರಂಭದ ಬಳಿಕ ವಿದ್ವತ್ ಗೋಷ್ಠಿ ಹಾಗೂ ವಿದ್ಯಾರ್ಥಿ ಗೋಷ್ಠಿ ನಡೆಯಲಿದೆ. 12ರಿಂದ 3 ಗಂಟೆ ತನಕ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಂದ ದಾಸ ಸಾಹಿತ್ಯ ಸಂಕೀರ್ತನೆ ನಡೆಯಲಿದೆ ಗಂಟೆಯಿಂದ ಎಂದು ಅವರು ತಿಳಿಸಿದರು.
ಸಂಜೆ 3ರಿಂದ ನಡೆಯುವ ಸಮಾರೋಪ ಸಮಾರಂಭದಲ್ಲಿ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಡಾ. ಶ್ರೀಪತಿ ಕಲ್ಲೂರಾಯ ಅಧ್ಯಕ್ಷತೆ ವಹಿಸುವರು. ಅಖಿಲ ಭಾರತೀಯ ಸಾಹಿತ್ಯ ಪರಿಷತ್ತು ದ.ಕ. ಜಿಲ್ಲಾ ಸಮಿತಿ ಅಧ್ಯಕ್ಷ ಪಿ.ಬಿ. ಹರೀಶ್ ರೈ ಸಮಾರೋಪ ಭಾಷಣ ಮಾಡುವರು. ಈ ಸಂದರ್ಭದಲ್ಲಿ ಶ್ರೀ ಮಧ್ವಾಧೀಶ ವಿಠಲದಾಸ ನಾಮಾಂಕಿತ ರಾಮಕೃಷ್ಣ ಕಾಟುಕುಕ್ಕೆ ಅವರಿಗೆ ಗೌರವ ಸಮರ್ಪಣೆ ನಡೆಯಲಿದೆ. ಕಾಲೇಜಿನ ಆಡಳಿತ ಮಂಡಳಿ ಸಂಚಾಲಕ ಮುರಳಿಕೃಷ್ಣ ಕೆ.ಎನ್. ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸಮಿತಿ ಗೌರವಾಧ್ಯಕ್ಷ ವಿ.ಬಿ. ಅರ್ತಿಕಜೆ, ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥ ಡಾ. ಮನಮೋಹನ ಎಂ, ಪತ್ರಿಕೋದ್ಯಮ ವಿಭಾಗ ಮುಖ್ಯಸ್ಥೆ ಭವ್ಯಾ ಆರ್. ನಿಡ್ಪಳ್ಳಿ ಉಪಸ್ಥಿತರಿದ್ದರು.