ಬೇಕಾಬಿಟ್ಟಿ ಸಿಮ್ ಖರೀದಿ ನಿಯಂತ್ರಣಕ್ಕೆ ಕೇಂದ್ರ ಸರಕಾರ ಯಾವ ನಿಯಮಗಳನ್ನು ತರಲಿದೆ | ಇಲ್ಲಿದೆ ಡಿಟೈಲ್ಸ್

ಬೇಕಾಬಿಟ್ಟಿ ಸಿಮ್ ಖರೀದಿಯನ್ನು ನಿಯಂತ್ರಿಸಲು ಕೇಂದ್ರ ಸರಕಾರ ಕಠಿಣ ನಿಯಮಗಳನ್ನು ಜ್ಯಾರಿಗೆ ತರುವ ಮಹತ್ವದ ನಿರ್ಧಾರ ಕೈಗೊಂಡಿದೆ.

ಹೆಚ್ಚುತ್ತಿರುವ ಸೈಬರ್ ವಂಚನೆ ಮತ್ತು ದೇಶ ವಿರೋಧಿ ಕೃತ್ಯಗಳಿಗೆ ಕಡಿವಾಣ ಹಾಕುವ ಜತೆಗೆ ಕಾನೂನು ಬಾಹಿರ ಚಟುವಟಿಕೆಗಳಿಗೆ ದಾರಿ ಮಾಡಿಕೊಡುವ ಡೀಲರ್‍ ಗಳಿಗೆ ಬಿಸಿ ಮುಟ್ಟಿಸುವ ನಿಟ್ಟಿನಲ್ಲಿ ಸಿಮ್ ಖರೀದಿಯಲ್ಲಿ ಕಠಿಣ ನಿಯಮಗಳನ್ನು ತರಲಿದೆ.

ಡಿ.1ರಿಂದ ಸಿಮ್ ಮಾರಾಟದ ನಿಯಮಗಳಲ್ಲಿ ಬದಲಾವಣೆಯಾಗಲಿದ್ದು, ಸಿಮ್‌ಗಳನ್ನು ಮಾರಾಟ ಮಾಡುವ ಎಲ್ಲ ಡೀಲರ್‌ಗಳು ಪರಿಶೀಲನೆಯನ್ನು ಹೊಂದಿರುವುದು ಕಡ್ಡಾಯವಾಗಿರುತ್ತದೆ. ಅಷ್ಟೇ ಅಲ್ಲದೆ ಡೀಲರ್‌ಗಳು ಸಿಮ್‌ಗಳನ್ನು ಮಾರಾಟ ಮಾಡಲು ನೋಂದಾಯಿಸಿಕೊಳ್ಳುವುದು ಕಡ್ಡಾಯವಾಗಿದೆ.



































 
 

ಸಿಮ್ ಮಾರಾಟಗಾರರು ಮತ್ತು ಖರೀದಿದಾರರು ಇನ್ನು ಮುಂದೆ ಈ ನಿಯಮಗಳನ್ನು ಅನುಸರಿಸುವುದು ಅಗತ್ಯವಾಗಿದೆ. ಸಿಮ್ ಕಾರ್ಡ್‌ಗಳನ್ನು ಮಾರಾಟ ಮಾಡುವವರು ಸಮಗ್ರ ಪರಿಶೀಲನೆಗೆ ಒಳಪಡುವ ಅಗತ್ಯವಿದೆ. ಪೊಲೀಸ್‌ ಪರಿಶೀಲನೆ ಜವಾಬ್ದಾರಿಯನ್ನು ಆಯಾ ಟೆಲಿಕಾಮ್ ಸಂಸ್ಥೆಗಳು ವಹಿಸಿಕೊಳ್ಳಬೇಕಿದೆ. ಅಲ್ಲದೇ, ಸಿಮ್ ಮಾರಾಟ ಮಾಡಿದ ಕ್ಷಣವೇ ನೋಂದಣಿಯನ್ನೂ ಮಾಡಬೇಕಿದ್ದು ಈ ನಿಯಮ ಪಾಲನೆಯಲ್ಲಿ ವಿಫಲರಾದರೆ 10 ಲಕ್ಷ ರೂ. ದಂಡ ಪಾವತಿಸಬೇಕಾಗುತ್ತದೆ.

ಸಿಮ್‌ಕಾರ್ಡ್ ನಿಷ್ಕ್ರಿಯಗೊಂಡ ತಕ್ಷಣ ಅದೇ ನಂಬ‌ರ್ ಅನ್ನು ಬೇರೆ ಯಾರಿಗೋ ಹಂಚಿಕೆ ಮಾಡುವಂತಿಲ್ಲ. ಸಿಮ್ ನಿಷ್ಕ್ರಿಯಗೊಂಡ 90 ದಿನಗಳ ಒಳಗೆ ಅದೇ ವ್ಯಕ್ತಿ ಬೇಕಿದ್ದರೆ ನವೀಕರಣ ಮಾಡಿಕೊಳ್ಳುವ ಅವಕಾಶವಿದೆ. ಅವಧಿ ಮೀರಿದ ಬಳಿಕ ಬೇಕಿದ್ದರೆ ಮತ್ತದೇ ಸಂಖ್ಯೆಯ ಹಂಚಿಕೆಗೆ ಅವಕಾಶವಿದೆ. ನಿಯಮ ಉಲ್ಲಂಘನೆ ಮಾಡಿದರೆ 10 ಲಕ್ಷ ರೂ. ದಂಡ, ಗಂಭೀರ ಪ್ರಕರಣವಾದಲ್ಲಿ ಜೈಲು ಶಿಕ್ಷೆಯನ್ನು ಈ ನಿಯಮದ ಪ್ರಕಾರ ವ್ಯಾಪಾರಸ್ಥರು ಹಾಗೂ ಕಂಪನಿಗಳಿಗೆ ಮಾತ್ರ ಸಿಮ್ ಕಾರ್ಡ್‌ಗಳನ್ನು ದೊಡ್ಡ ಪ್ರಮಾಣದಲ್ಲಿ ಖರೀದಿಸಲು ಅನುಮತಿ ನೀಡಲಾಗಿದೆ. ಸಾಮಾನ್ಯ ಬಳಕೆದಾರರು ಒಂದು ಗುರುತಿನಿಂದ ಗರಿಷ್ಠ 9 ಸಿಮ್‌ಗಳನ್ನು ಮಾತ್ರ ಪಡೆಯಲು ಅವಕಾಶವಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top