ಪುತ್ತೂರು: ಪುತ್ತಿಲ ಪರಿವಾರದ ನೇತೃತ್ವದಲ್ಲಿ ನಡೆಯಲಿರುವ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ ಮತ್ತು ಸನಾತನ ಸಮಾಗಮದ ಕಾರ್ಯಾಲಯ ಮತ್ತು ಮಾಹಿತಿ ಕೇಂದ್ರ ಡಿ. 2ರಂದು ಶ್ರೀ ಮಹಾಲಿಂಗೇಶ್ವರ ದೇವಳದ ಬ್ರಹ್ಮರಥ ಮಂದಿರದ ಮುಂಭಾಗ ಉದ್ಘಾಟನೆಗೊಂಡಿತು.
ಮಾಣಿಲ ಶ್ರೀ ಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಅವರು ಕಾರ್ಯಾಲಯ ಉದ್ಘಾಟಿಸಿ, ಪುತ್ತಿಲ ಪರಿವಾರದ ವತಿಯಿಂದ ಪ್ರಥಮ ಬಾರಿಗೆ ಡಿ. 24 ಮತ್ತು 25ರಂದು ನಡೆಯಲಿರುವ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ ಮತ್ತು ಸನಾತನ ಸಮಾಗಮ ಕಾರ್ಯಕ್ರಮ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.
ಇದೇ ಸಂದರ್ಭ ಪುತ್ತಿಲ ಪರಿವಾರದ ವೆಬ್ ಸೈಟ್ ಗೆ ಚಾಲನೆ ನೀಡಲಾಯಿತು.
ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ವೇ ಮೂ ವಿ.ಎಸ್ ಭಟ್ ಪ್ರಾರ್ಥನೆ ನೆರವೇರಿಸಿದರು. ಕಲ್ಯಾಣೋತ್ಸವ ಸಮಿತಿ ಗೌರವಾಧ್ಯಕ್ಷ ಉದ್ಯಮಿ ರವಿ ಶೆಟ್ಟಿ ನೇಸರ ಕಂಪ, ಉದ್ಯಮಿಗಳಾದ ಜಯಕುಮಾರ್ ನಾಯರ್, ಸ್ನೇಹ ಟೆಕ್ಸ್ ಟೈಲ್ಸ್ ನ ಸತೀಶ್, ಅಕ್ಷಯ ಗ್ರೂಪ್ ನ ಜಯಂತ ನಡುಬೈಲು, ಹರಿಪ್ರಸಾದ್ ಹೊಟೇಲ್ ನ ಹರಿನಾರಾಯಣ ಹೊಳ್ಳ, ಪುತ್ತಿಲ ಪರಿವಾರದ ಸ್ಥಾಪಕರು ಮತ್ತು ಶ್ರೀನಿವಾಸ ಕಲ್ಯಾಣೋತ್ಸವದ ಸಂಚಾಲಕ ಅರುಣ್ ಕುಮಾರ್ ಪುತ್ತಿಲ, ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಪದಾಧಿಕಾರಿಗಳು, ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಮಾರ್ತ, ಸ್ವಾಗತ ಸಮಿತಿ ಅಧ್ಯಕ್ಷರು ಕಿರಣ್ ಗೌಡ, ಉಪಾಧ್ಯಕ್ಷರುಗಳಾದ ಪ್ರವೀಣ್ ಶೆಟ್ಟಿ ತಿಂಗಳಾಡಿ, ಕೃಷ್ಣ ಪ್ರಸಾದ್ ಶೆಟ್ಟಿ,ಸ್ವಾಗತ ಸಮಿತಿ ಸಂಚಾಲಕರಾದ ಗಣೇಶ್ ಭಟ್ ಮಕರಂದ, ಮಹಿಳಾ ಘಟಕದ ಅಧ್ಯಕ್ಷರಾದ ಮಲ್ಲಿಕಾ ಪ್ರಸಾದ್, ಜಯಲಕ್ಷ್ಮೀ, ಅಶ್ವಿನಿ ಸಂಪ್ಯ, ಕಲ್ಯಾಣೋತ್ಸವ ಪ್ರಧಾನ ಕಾರ್ಯದರ್ಶಿ ಮನೀಶ್ ಕುಲಾಲ್, ಪುತ್ತಿಲ ಪರಿವಾರದ ಪ್ರಧಾನ ಕಾರ್ಯದರ್ಶಿ ಉಮೇಶ್ ಕೋಡಿಬೈಲು, ರವಿ ರೈ ಕೆದಂಬಾಡಿ ಮಠ, ಆರ್ಯಾಪು ಗ್ರಾ.ಪಂ. ಸದಸ್ಯ ಸುಬ್ರಹ್ಮಣ್ಯ ಬಲ್ಯಾಯ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.