ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ ಸಂದರ್ಭ ದಂಡ್ ಶಿಲಾಲ್ ಪರಿಚಾರಕರಾಗಿ ಕಾರ್ಯನಿರ್ವಹಿಸುತ್ತಿದ್ದ ಕೆರೆಮೂಲೆ ನಿವಾಸಿ ಸಂಪತ್ ಪೂಜಾರಿ (31) ಬುಧವಾರ ಮುಂಜಾನೆ ನಿಧನರಾಗಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಪುತ್ತೂರು ಆಸ್ಪತ್ರೆಗೆ ದಾಖಲಾಗಿ, ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ನಿಧನರಾದರು.
ಮೃತರು ತಂದೆ, ತಾಯಿ, ಸಹೋದರನ್ನು ಅಗಲಿದ್ದಾರೆ.