ಪುತ್ತೂರು : ನೆಟ್ಟಣಿಗೆ ಮುಡ್ನೂರು ಗ್ರಾಮದ ಪುಳಿಮಾರಡ್ಕದಲ್ಲಿ 80 ವರ್ಷದ ವೃದ್ಧರೊಬ್ಬರು ಗೇರು ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ನೆಟ್ಟಣಿಗೆ ಮುಡ್ನೂರು ಗ್ರಾಮದ ಪುಳಿಮಾರಡ್ಕ ನಿವಾಸಿ ಮಾಲಿಂಗ ನಾಯ್ಕ(80) ಆತ್ಮಹತ್ಯೆ ಮಾಡಿಕೊಂಡವರು.
ಅವರು ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದ್ದು, ಡಿ.5 ರಂದು ಅವರು ಮನೆಯ ಸಮೀಪದ ಗೇರು ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಯ ಕುರಿತು ಮೃತರ ಪುತ್ರಿ ಭಾಗಿ ಅವರು ನೀಡಿದ ದೂರಿನಂತೆ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.