ಪುತ್ತೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ ಜ್ಞಾನಶರಧಿ/ ಜ್ಞಾನವಾರಿಧಿ ಎಂಬ ನೈತಿಕ ಮೌಲ್ಯಾಧಾರಿತ ಪುಸ್ತಕದ ಅಧ್ಯಯನ ಆಧರಿತ ವಿವಿಧ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಹಲವು ಪ್ರಶಸ್ತಿ ಗಳಿಸಿದ್ದಾರೆ.
ಪ್ರಾಥಮಿಕ ವಿಭಾಗದಲ್ಲಿ ವಿದ್ಯಾರ್ಥಿಗಳಾದ ಸಾನ್ವಿ ಎಸ್. ಭಾಷಣದಲ್ಲಿ ಪ್ರಥಮ, ಆಧ್ಯನ್ ಆರ್. ಚಿತ್ರಕಲೆಯಲ್ಲಿ ಪ್ರಥಮ, ಅನನ್ಯ ಎನ್. ಪ್ರಬಂಧದಲ್ಲಿ ದ್ವಿತೀಯ, ನಾಗಭೂಷಣ ಕಿಣಿ ಶ್ಲೋಕ ಕಂಠಪಾಠದಲ್ಲಿ ದ್ವಿತೀಯ ಹಾಗೂ ಪ್ರೌಢಶಾಲಾ ವಿಭಾಗದಲ್ಲಿ ಅಮೋಘ ಕೃಷ್ಣ ಕೆ. ಶ್ಲೋಕ ಕಂಠಪಾಠದಲ್ಲಿ ಪ್ರಥಮ ಹಾಗೂ ನಿಲಿಷ್ಕ ಕೆ. ಚಿತ್ರಕಲೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.
ಬಹುಮಾನ ಗಳಿಸಿದ ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.