ನವದೆಹಲಿ: ಪ್ರಧಾನಿ ನರೇಂದ್ರ ಮೋದಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವರು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ 77ನೇ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ.
‘ಶ್ರೀಮತಿ ಸೋನಿಯಾ ಗಾಂಧಿಜಿ ಅವರಿಗೆ ಅವರ ಜನ್ಮದಿನದ ಶುಭಾಶಯಗಳು. ಅವರಿಗೆ ದೀರ್ಘ ಮತ್ತು ಆರೋಗ್ಯಕರ ಜೀವನ ದೊರಕಲಿ’ ಎಂದು ಪ್ರಧಾನಿ ಮೋದಿ ಶನಿವಾರ ಟ್ವೀಟ್ ಮಾಡಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟ್ವೀಟ್ ಮಾಡಿದ್ದು, ‘ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿಜಿ ಅವರಿಗೆ ಅವರ ಜನ್ಮದಿನದ ಶುಭಾಶಯಗಳು. ತುಳಿತಕ್ಕೊಳಗಾದ ವ್ಯಕ್ತಿಗಳ ಹಕ್ಕುಗಳಿಗಾಗಿ ಪಟ್ಟುಬಿಡದ ವಕೀಲರಂತೆ ಸೋನಿಯಾ ಗಾಂಧಿ ಹೋರಾಡಿದರು. ಪ್ರತಿಕೂಲ ಪರಿಸ್ಥಿತಿಯಲ್ಲಿಯೂ ಅವರು ಧೈರ್ಯ ಮತ್ತು ನಿಸ್ವಾರ್ಥ ತ್ಯಾಗವು ಎಲ್ಲರಿಗೂ ಸ್ಫೂರ್ತಿಯಾಗಿದೆ. ದೀರ್ಘ ಮತ್ತು ಆರೋಗ್ಯಕರ ಜೀವನ ಅವರದ್ದಾಗಲಿ ಎಂದು ನಾನು ಅವರಿಗೆ ಶುಭ ಹಾರೈಸುತ್ತೇನೆ’ ಎಂದಿದ್ದಾರೆ.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್, ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್, ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ, ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೂಡ ಶುಭ ಕೋರಿದ್ದಾರೆ.
























