2024ರ ಚುನಾವಣೆಯಲ್ಲಿ ಮತ್ತೊಮ್ಮೆ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವ ಬಗ್ಗೆ ದೃಢಪಡಿಸಿದ್ದು, ಮತ್ತೊಮ್ಮೆ ಅಧ್ಯಕ್ಷ ಗಾದಿಯ ಮೇಲೆ ಕಣ್ಣಿಟ್ಟಿದ್ದಾರೆ.
ಸುದೀರ್ಘ ಸೇವೆ ಸಲ್ಲಿಸಿರುವ ವಿಶ್ವದ ಕೆಲವೇ ಕೆಲವು ನಾಯಕರ ಪೈಕಿ ಪುಟಿನ್ ಗುರುತಿಸಿಕೊಂಡಿದ್ದಾರೆ.
ಶುಕ್ರವಾರ ಉಕ್ರೇನ್ ಯುದ್ಧದಲ್ಲಿ ಸೇವೆ ಸಲ್ಲಿಸಿದ ಸೈನಿಕರ ಜೊತೆ ಮಾತನಾಡುತ್ತಾ, ತಾನು ಮತ್ತೊಮ್ಮೆ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ. ಇದೇ ಸಂದರ್ಭ ಝೋಗಾ ಅವರಿಗೆ ರಷ್ಯಾದ ಅತ್ಯುನ್ನತ ಮಿಲಿಟರಿ ಗೌರವವಾದ ಹೀರೋ ಆಫ್ ರಷ್ಯಾ ಗೋಲ್ಡ್ ಸ್ಟಾರ್ ನೀಡಿ ಗೌರವಿಸಲಾಯಿತು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಝೋಗಾ, ಮತ್ತೊಮ್ಮೆ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವಂತೆ ಪುಟಿನ್ ಅವರನ್ನು ಕೇಳಿಕೊಂಡರು. ಪ್ರತಿಕ್ರಿಯಿಸಿದ ಪುಟಿನ್, “ನಾನು ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತೇನೆ. ನಾನು ವಿವಿಧ ಸಮಯಗಳಲ್ಲಿ ವಿಭಿನ್ನ ಆಲೋಚನೆಗಳನ್ನು ಹೊಂದಿದ್ದೇನೆ ಎಂಬುದನ್ನು ನಾನು ಮರೆಮಾಡುವುದಿಲ್ಲ. ಆದರೆ ಈಗ ನಿರ್ಧಾರ ತೆಗೆದುಕೊಳ್ಳುವ ಸಮಯ ಬಂದಿದೆ” ಎಂದು ಪುಟಿನ್ ಪ್ರತಿಕ್ರಿಯಿಸಿದ್ದಾರೆ.