ನಿಂತಿದ್ದ ಟ್ರ್ಯಾಕ್ಟರಿಗೆ ಆ್ಯಂಬುಲೆನ್ಸ್ ಡಿಕ್ಕಿಯಾಗಿ, ತುಂಬು ಗರ್ಭಿಣಿ ಮೃತಪಟ್ಟ ಘಟನೆ ವಿಜಯಪುರದ ತಾಳಿಕೋಟೆಯಲ್ಲಿ ನಡೆದಿದೆ.
ಮೃತರನ್ನು ಭಾಗ್ಯಶ್ರೀ ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯುವ ಹಾದಿಯಲ್ಲಿ ಗರ್ಭಿಣಿ ಮೃತಪಟ್ಟಿರುವುದಾಗಿ ವರದಿಯಾಗಿದೆ. ಆಂಬ್ಯುಲೆನ್ಸ್ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎಂದು ದೂರಲಾಗಿದೆ.
ತುಂಬು ಗರ್ಭಿಣಿಯನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ, ಆ್ಯಂಬುಲೆನ್ಸ್ ಡಿಕ್ಕಿ ಹೊಡೆದಿದೆ. ಕಬ್ಬು ತುಂಬಿದ್ದ ಟ್ರ್ಯಾಕ್ಟರ್ ರಸ್ತೆ ಬದಿ ನಿಂತಿತ್ತು. ಆ್ಯಂಬುಲೆನ್ಸ್’ನಲ್ಲಿದ್ದ ತುಂಬು ಗರ್ಭಿಣಿ ಸಹಿತ ಇಬ್ಬರು ಸ್ಟಾಫ್ ನರ್ಸ್, ಓರ್ವ ಸಹಾಯಕ ಗಾಯಗೊಂಡಿದ್ದರು.
ತಾಳಿಕೋಟೆ ಸಮುದಾಯ ಆಸ್ಪತ್ರೆ ಬಳಿ ಮೃತ ಭಾಗ್ಯಶ್ರೀ ಪೋಷಕರು ಪ್ರತಿಭಟನೆ ನಡೆಸಿದ್ದು, ವೈದ್ಯಾಧಿಕಾರಿ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಗರ್ಭಿಣಿಯನ್ನು ಜಿಲ್ಲಾಸ್ಪತ್ರೆಗೆ ರವಾನೆ ಮಾಡಿದ್ದಕ್ಕೆ ಮೃತಳ ಪೋಷಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕಳೆದ ವಾರವಷ್ಟೇ ಭಾಗ್ಯಶ್ರೀ ದಂಪತಿ ವಿವಾಹ ವಾರ್ಷಿಕೋತ್ಸವ ಆಚರಿಸಿದ್ದರು.